ಬೆಂಗಳೂರು, ಅಕ್ಟೋಬರ್, 26, 2024 (www.justkannada.in): ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶಿಸಿದೆ.
ಬೇಲೆಕೇರಿ ಬಂದರಿನಲ್ಲಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ದೋಷಿ ಎಂಬುದಾಗಿ ಕೋರ್ಟ್ ತೀರ್ಪು ನೀಡಿತ್ತು. 2010ರ ಬೇಲೆಕೇರಿ ಬಂಧರಿನಲ್ಲಿನ ಅದಿರು ನಾಪತ್ತೆ ಪ್ರಕರಣ ಸಂಬಂಧ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಈ ಕುರಿತು ತೀರು ಪ್ರಕಟಿಸಿರುವ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರು, ಕಳ್ಳತನ ಪ್ರಕರಣದಲ್ಲಿ ಅಪರಾಧಿಗಳಿಗೆ 5 ವರ್ಷ ಅಲ್ಲದೆ ವಂಚನೆ ಪ್ರಕರಣದಲ್ಲಿ 7 ವರ್ಷ ಹಾಗೂ ಒಳಸಂಚು ಆರೋಪದಲ್ಲಿ 5 ವರ್ಷ ಶಿಕ್ಷೆ ಪ್ರಕಟಿಸಲಾಗಿದೆ.
2010 ರ ಜೂನ್ 2ರಲ್ಲಿ, ಅಂದರೆ ಕೇವಲ 80 ದಿನಗಳಲ್ಲಿ 6 ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ನಾಪತ್ತೆಯಾಗಿತ್ತು. ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಸಿಬಿಐ ತನಿಖೆ ಆರಂಭಿಸಿತ್ತು. ಶಾಸಕ ಸತೀಶ್ ಸೈಲ್, ಮಹೇಶ್ ಬಿಳಿಯೆ, ಕಾರಾಪುಡಿ ಮಹೇಶ್, ಸ್ವಸ್ತಿಕ್ ನಾಗರಾಜು ಸೇರಿದಂತೆ ಹಲವರ ವಿರುದ್ಧ ಆರೋಪಪಟ್ಟಿ ದಾಖಲಿಸಿತ್ತು. ಇದೀಗ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶಿಕ್ಷೆ ಪ್ರಕಟಿಸಿದೆ. ಅಲ್ಲದೆ 9.54 ಕೋಟಿ ರೂ ದಂಡ ವಿಧಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
Key words: court, sentenced, Congress MLA, Satish Sail, 7 years, jail