ಬೆಂಗಳೂರು, ಆಗಸ್ಟ್ 02, 2020 (www.justkannada.in): ಕೋವಿಡ್ -19 ಪರಿಸ್ಥಿತಿ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಮಾನವ ಹಕ್ಕು ಆಯೋಗದಲ್ಲಿ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎಚ್. ಕೆ. ಪಾಟೀಲ್ ನೀಡಿದ ದೂರಿನ ಅನ್ವಯ ಪ್ರಕರಣವನ್ನು ದಾಖಲು ಮಾಡಿಕೊಳ್ಳಲಾಗಿದೆ. ಆಗಸ್ಟ್ 28ರಂದು ಈ ಕುರಿತ ಮೊದಲ ವಿಚಾರಣೆ ನಡೆಯಲಿದೆ.
ಕೋವಿಡ್ ಪರಿಸ್ಥಿತಿ ನಿರ್ವಹಣೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಕೋವಿಡ್ ಕೇರ್ ಸೆಂಟರ್ಗಳಲ್ಲಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ಸಕಾಲಕ್ಕೆ ಅಂಬ್ಯುಲೆನ್ಸ್ಗಳು ಸಿಗುತ್ತಿಲ್ಲ ಎಂದು ಎಚ್. ಕೆ. ಪಾಟೀಲ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದರು.