ಬೆಂಗಳೂರು,ಮೇ,3,2021(www.justkannada.in): ಕೊರೋನಾ ನಿಯಂತ್ರಣದಲ್ಲಿ ರಾಜ್ಯದಲ್ಲಿ ಅತ್ಯುನ್ನತ ಮಟ್ಟದ ಸಮಿತಿಯಾದ ಕೋವಿಡ್ ಕಾರ್ಯಪಡೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಪುನಾರಚಿಸಿದ್ದು, ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರನ್ನು ಕಾರ್ಯಪಡೆ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ.
ಲೋಕೋಪಯೋಗಿ ಸಚಿವರೂ ಆದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಈವರೆಗೂ ಈ ಕಾರ್ಯಪಡೆ ಅಧ್ಯಕ್ಷರಾಗಿದ್ದರು.
ಪುನಾರಚನೆಗೊಂಡ ಈ ಕಾರ್ಯಪಡೆಯಲ್ಲಿ ಅಧ್ಯಕ್ಷರಾಗಿ ಡಾ.ಅಶ್ವತ್ಥನಾರಾಯಣ ಜತೆಯಲ್ಲಿ ಸದಸ್ಯರಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್.ಸುರೇಶ್ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಖಾತೆ ಸಚಿವ ಸಿ.ಸಿ.ಪಾಟೀಲ್ ಹಾಗೂ ಆರೋಗ್ಯ & ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ.ಸುಧಾಕರ್ ಇದ್ದಾರೆ.
ಇಡೀ ರಾಜ್ಯದ ಕೋವಿಡ್ ಪರಿಸ್ಥಿತಿಯ ಉಸ್ತುವಾರಿ ಜತೆಗೆ, ಉನ್ನತ ಮಟ್ಟದ ನಿರ್ಧಾರಗಳನ್ನು ಕೈಗೊಳ್ಳುವ ಅಧಿಕಾರ ಈ ಕಾರ್ಯಪಡೆಗೆ ಇದೆ.
Key words: Covid-19 -Task Force- Reconstruction-DCM Dr. Ashwaththanarayan –President- appoints