ಚಿತ್ರದುರ್ಗ,ಜೂನ್,22,2021(www.justkannada.in): ರಾಜ್ಯದಲ್ಲಿ ಕೊರೋನಾ 2ನೇ ಅಲೆ ತಗ್ಗುತ್ತಿದ್ದು 3ನೇ ಅಲೆ ಭೀತಿ ಎದುರಾಗಿದೆ. ಈ ಮಧ್ಯೆ 3ನೇ ಅಲೆಯ ತಡೆಗಟ್ಟಲು ಕೈಗೊಳ್ಳಬೇಕಾದ ಸಿದ್ಧತೆ ಬಗ್ಗೆ ಡಾ.ದೇವಿಶೆಟ್ಟಿ ನೇತೃತ್ವದ ತಜ್ಞರ ಸಮಿತಿ ವರದಿ ನೀಡಿದ್ದು 3ನೇ ಅಲೆಯಲ್ಲಿ ಮಕ್ಕಳಿಗೆ ಸಮಸ್ಯೆಯಾಗುತ್ತೆ ಎಂದು ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಈ ಬಗ್ಗೆ ಚಿತ್ರದುರ್ಗದಲ್ಲಿ ಮಾತನಾಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ, 3ನೇ ಅಲೆ ಎದುರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತದೆ. ಪ್ರತಿ ತಾಲ್ಲೂಕಿನಲ್ಲೂ ಮಕ್ಕಳಿಗಾಗಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗುತ್ತದೆ. ಗಂಡು, ಹೆಣ್ಣು, ವಿಶೇಷ ಚೇತನ ಮಕ್ಕಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು. ಆಸ್ಪತ್ರೆಗಳಲ್ಲಿ ಪ್ರತ್ಯೇಕ ಬೆಡ್ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
Key words: covid Care Center – every taluk –children-Minister- Shashikala Jolle.