ಬೆಂಗಳೂರು,ಜನವರಿ,10,2022(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾದರೇ ಲಾಕ್ ಡೌನ್ ಮಾಡಬೇಕಾಗುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಕೊರೋನಾ ಕೇಸ್ ಹೆಚ್ಚಾದರೇ ತಿಂಗಳಗಂಟಲೇ ಲಾಕ್ ಡೌನ್ ಮಾಡಬೇಕಾಗುತ್ತೆ. ಪಾದಯಾತ್ರೆ ಮೂಲಕ ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ನಾವು ಅಸಹಾಯಕರೂ ಅಲ್ಲ ಅಸಮರ್ಥರೂ ಅಲ್ಲ. ಕಾನೂನು ರೀತಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದರು.
ಡಿಕೆ ಶಿವಕುಮಾರ್ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳದಿರುವುದು ದಾಸ್ಯತನ. ಅಧಿಕಾರಿಗಳನ್ನ ಹೆದರಿಸಿ ಕಳಿಸಿರುವುದು ಸರಿಯಲ್ಲ. ಡಿಕೆಶಿ ಮಾಸ್ಕ್ ಧರಿಸದೇ ಪಾದಯಾತ್ರೆ ಮಾಡುತ್ತಿದ್ದಾರೆ. ಕೊರೊನಾ ಸೋಂಕಿನ ನಡುವೆಯೂ ಪಾದಯಾತ್ರೆ ಕೈಗೊಳ್ಳುವುದರ ಮೂಲಕ ಕಾಂಗ್ರೆಸ್ ನಾಯಕರು ಜನರ ಬದುಕಿನ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ಕಾಂಗ್ರೆಸ್ ನಾಯಕರ ಉದ್ದೇಶ ನೀರಿನ ಮೇಲೆ ರಾಜಕೀಯ ಮಾಡುವುದು. ಆದರೆ ನಮ್ಮ ಕಾಳಜಿ ಸಾರ್ವಜನಿಕರ ಆರೋಗ್ಯ ವಿಚಾರವಾಗಿದೆ ಎಂದು ತಿಳಿಸಿದ್ದಾರೆ. ಸಿದ್ದುಗೆ ಜ್ವರ ಇದೆ. ಏನು ಜ್ವರ ಅಂತಾ ಗೊತ್ತಿಲ್ಲ ಎಂದರು.
ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಜಿಲ್ಲಾಡಳಿತ ನಿಭಾಯಿಸುತ್ತಿದೆ. ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅವರು ನ್ಯಾಯಾಲಯದಲ್ಲಿ ಉತ್ತರಿಸಲಿ ಎಂದು ಅರಗ ಜ್ಞಾನೇಂದ್ರ ತಿಳಿಸಿದರು.
Key words: Covid case –lockdown-Home Minister -Araga Jnanendra