ಮೈಸೂರು,ಮಾರ್ಚ್,24,2021(www.justkannada.in): ಮೈಸೂರಿನಲ್ಲಿ ಸೋಂಕಿನ ಪ್ರಕರಣ ಹೆಚ್ಚಾದಲ್ಲಿ ಕೋವಿಡ್ ಸೆಂಟರ್ ಪುನಾರಂಭ ಮಾಡುತ್ತೇವೆ ಎಂದು ಮೈಸೂರು ಜಿಲ್ಲಾಧಿಕಾರಿ ಡಿಸಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.
ಇಂದು ಈ ಬಗ್ಗೆ ಮಾತನಾಡಿದ ಡಿಸಿ ರೋಹಿಣಿ ಸಿಂಧೂರಿ, ಮೈಸೂರಿನಲ್ಲಿ ಕೊರೋನಾ ಸೊಂಕು ಹೆಚ್ಚಾದ ಹಿನ್ನೆಲೆ, ಸರ್ಕಾರಿ ಜಾಥಾ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕಲು ಜಿಲ್ಲಾಡಳಿತ ಚಿಂತನೆ ನಡೆಸಿದೆ. ದಿನೇ ದಿನೇ ಸೊಂಕಿನ ಪ್ರಕರಣ ಹೆಚ್ಚಾಗುತ್ತಿದೆ. ಸರ್ಕಾರದಿಂದ ನಡೆಯುವ ಹೆಚ್ಚು ಜನ ಸೇರುವ ಕಾರ್ಯಕ್ರಮಗಳನ್ನು ಕೂಡ ನಿಲ್ಲಿಸಲಾಗುವುದು. ಸರ್ಕಾರದ ಮಾರ್ಗಸೂಚಿಯಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಸೋಂಕಿನ ಪ್ರಕರಣ ಹೆಚ್ಚಾದಲ್ಲಿ ಕೋವಿಡ್ ಸೆಂಟರ್ ಪುನಾರಂಭ ಮಾಡುತ್ತೇವೆ ಎಂದು ತಿಳಿಸಿದರು.
ಬನ್ನೂರಿನಲ್ಲಿ ಶಾಲಾ ಮಕ್ಕಳಿಗೆ ಸಾಮೂಹಿಕ ಸೋಂಕು ವಿಚಾರ ಕುರಿತು ಮಾತನಾಡಿದ ಡಿಸಿ ರೋಹಿಣಿ ಸಿಂಧೂರಿ, ಶಾಲಾ ಆಡಳಿತ ಮಂಡಳಿಯವರು ಸಂಪರ್ಕಿರೆಲ್ಲರಿಗೂ ಟೆಸ್ಟ್ ಮಾಡಿಸಲಾಗುತ್ತಿದೆ. ಈಗಾಗಲೇ 1500 ಸಾವಿರಕ್ಕೂ ಹೆಚ್ಚು ಪರೀಕ್ಷೆ ಮಾಡಲಾಗಿದೆ. ಶಾಲಾ ಕಾಲೇಜುಗಳಲ್ಲಿ ಕೊರೋನಾ ಸೋಂಕಿನ ಪರೀಕ್ಷೆಗೆ ಆದ್ಯತೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.
Key words: covid Center – corona—infection- increased- Mysore DC- Rohini Sindhuri.