ಬೆಂಗಳೂರು,ಜು,20,2020(www.justkannada.in): ಕೋವಿಡ್ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರವಾಗಿದೆ ಎಂದು ಆರೋಪಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಡಿಸಿಎಂ ಅಶ್ವಥ್ ನಾರಾಯಣ್ ತಿರುಗೇಟು ನೀಡಿದ್ದಾರೆ.
ಕೋವಿಡ್ ಕಿಟ್ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಸಿದ್ಧರಾಮಯ್ಯ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಯಾವ ಆಧಾರದ ಮೇಲೆ ಆರೋಪ ಮಾಡಿದ್ದಾರೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಪ್ರಶ್ನಿಸಿದರು.
ಇಂದು ಮಾಧ್ಯಮಗಳ ಜತೆ ಈ ಕುರಿತು ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್, ಕೋವಿಡ್ ಕಿಟ್ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ನಮ್ಮ ಇಲಾಖೆಯಲ್ಲೂ ನಯಾ ಪೈಸೆ ಹಗರಣ ನಡೆದಿಲ್ಲ. ಸಿದ್ಧರಾಮಯ್ಯ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅಧಿಕಾರದಲ್ಲಿ ಇದ್ದಾಗ ಅವರು ಏನು ಕೆಲಸ ಮಾಡಲಿಲ್ಲ. ಈಗ ಕೋರೋನಾ ಸಂದರ್ಭದಲ್ಲಿ ಜನರ ಕಷ್ಟಕ್ಕೆ ಸ್ಪಂದಿಸದೆ ಸುಮ್ಮನೇ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಕೋವಿಡ್ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ಆರೋಪದ ಬಗ್ಗೆ ಸದನದಲ್ಲೂ ಚರ್ಚೆಯಾಗಲಿ. ಸದನದಲ್ಲಿ ಈ ಬಗ್ಗೆ ಉತ್ತರ ನೀಡಲು ಸಿದ್ಧ ಎಂದು ಸಿದ್ಧರಾಮಯ್ಯ ಆರೋಪಕ್ಕೆ ಡಿಸಿಎಂ ಅಶ್ವಥ್ ನಾರಾಯಣ್ ಉತ್ತರ ಕೊಟ್ಟರು.
Key words: covid kit-scam- DCM -Ashwath Narayan – former CM Siddaramaiah.