ಬೆಳಗಾವಿ,ಡಿಸೆಂಬರ್,22,2022(www.justkannada.in): ರಾಜ್ಯದಲ್ಲಿ ಕೋವಿಡ್ ಭೀತಿ ಹಿನ್ನೆಲೆ ಮುಂಜಾಗ್ರತಾ ಕ್ರಮಕ್ಕೆ ಸರ್ಕಾರ ಮುಂದಾಗಿದ್ದು ಈ ನಡುವೆ ಒಳಾಂಗಣ ಪ್ರದೇಶದಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಮತ್ತು ಎಲ್ಲರೂ ಬೂಸ್ಟರ್ ಡೋಸ್ ಪಡೆಯಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಕೋವಿಡ್ ಆತಂಕ ಹಿನ್ನೆಲೆಯಲ್ಲಿ ಇಂದು ಸುವರ್ಣಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಸಭೆಯಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಉಪಸ್ಥಿತರಿದ್ದರು.
ಸಭೆ ಬಳಿಕ ಮಾತನಾಡಿದ ಸಚಿವ ಸುಧಾಕರ್, ಒಳಾಂಗಣ ಪ್ರದೇಶದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ. ವಿದೇಶದಿಂದ ಬರುವ ಪ್ರಯಾಣಿಕರಿಗೆ ರ್ಯಾಂಡಮ್ ಟೆಸ್ಟ್ ಮಾಡುತ್ತೇವೆ. ಜಾಗತಿಕ ಮಟ್ಟದಲ್ಲಿ ಕೋವಿಡ್ ಸ್ಥಿತಿಗತಿ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿದೆ. ವರದಿ ಆಧಾರದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸಿಎಂ ಸೂಚನೆ ನೀಡಿದ್ದಾರೆ ಎಂದರು.
ಎಲ್ಲಾ ಕಡೆ ಕ್ಯಾಂಪ್ ಮಾಡಿ ಬೂಸ್ಟರ್ ಡೋಸ್ ಲಸಿಕೆ ನೀಡುತ್ತೇವೆ. ಲಸಿಕೆ ಪಡೆದರೇ ಯಾವುದೇ ತೊಂದರೆ ಇಲ್ಲ. ಲಸಿಕೆಗೂ ಸೈಡ್ ಎಫೆಕ್ಟ್ ಗೂ ಯಾವುದೇ ಸಂಬಂಧವಿಲ್ಲ. ಶೇ.20ರಷ್ಟು ಜನ ಮಾತ್ರ ಬೂಸ್ಟರ್ ಡೋಸ್ ಪಡೆದಿದ್ದಾರೆ. ಎಲ್ಲರೂ ಬೂಸ್ಟರ್ ಡೋಸ್ ಪಡೆಯಬೇಕು ಎಂದು ಸುಧಾಕರ್ ತಿಳಿದರು.
Key words: covid-Masks -booster dose-Health Minister- Dr. K. Sudhakar.