ಬಳ್ಳಾರಿ, ನವೆಂಬರ್,9,2024 (www.justkannada.in): ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಶಿಫಾರಸು ಮಾಡಿರುವ ಕುರಿತು ಮಾಜಿ ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಬಿ.ಶ್ರೀರಾಮುಲು, ಗೊಡ್ಡು ಬೆದರಿಕೆಗೆ ನಾವು ಹೆದರಲ್ಲ. ಸರ್ಕಾರದ ಭ್ರಷ್ಟಾಚಾರ ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ. ನಮ್ಮ ವಿರುದ್ದ ಒಂದೇ ಒಂದು ಆರೋಪ ಸಾಭೀತು ಮಾಡಲಿ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದರು.
ದ್ವೇಷ ರಾಜಕಾರಣ ಇದು ಒಳ್ಳೆಯದಲ್ಲ. ಈ ಸಂಬಂಧ ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ಮಾಜಿ ಸಚಿವ ಶ್ರೀರಾಮುಲು ತಿಳಿಸಿದರು.
Key words: Covid scam, Former minister, Sriramulu , legal fight