ಬೆಂಗಳೂರು,ಜು,18,2020(www.justkannada.in): ಮೆಡಿಕಲ್ ಸ್ಟೋರ್ ಗಳಲ್ಲಿ ಕೋವಿಡ್ ಪರೀಕ್ಷಾ ಕಿಟ್ ಮಾರಾಟ ಮಾಡಿದ್ರೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಔಷಧಿ ನಿಯಂತ್ರಣ ಇಲಾಖೆ ಮೆಡಿಕಲ್ ಸ್ಟೋರ್ ಮಾಲೀಕರಿಗೆ ಎಚ್ಚರಿಕೆ ನೀಡಿದೆ.
ಮೆಡಿಕಲ್ ಸ್ಟೋರ್ ಗಳಲ್ಲಿ ರ್ಯಾಪಿಡ್ ಆ್ಯಂಟಿ ಟೆಸ್ಟ್ ಕಿಟ್ ಗಳ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಸ್ವಯಂ ಕೋವಿಡ್ ಪರೀಕ್ಷಿಸಿಕೊಳ್ಳುವ ಕಿಟ್ ಗಳ ಮಾರಾಟ ಮಾಡದಂತೆ ಮೆಡಿಕಲ್ ಸ್ಟೋರ್ ಮಾಲೀಕರಿಗೆ ಔಷಧಿ ನಿಯಂತ್ರಣ ಇಲಾಖೆ ಸೂಚನೆ ನೀಡಿದೆ.
ಕೆಲ ಮೆಡಿಕಲ್ ಸ್ಟೋರ್ ಗಳಲ್ಲಿ ರ್ಯಾಪಿಡ್ ಆ್ಯಂಟಿ ಟೆಸ್ಟ್ ಕಿಟ್ ಮಾರಾಟ ಮಾಡುವ ಬಗ್ಗೆ ಮಾಹಿತಿ ಇದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಈ ಕಿಟ್ ಬಳಕೆ ಅಪಾಯಕಾರಿ. ಜನರ ಹಿತದೃಷ್ಟಿಯಿಂದ ಸಾರ್ವಜನಿಕವಾಗಿ ಈ ಕಿಟ್ ಮಾರಾಟ ಸಲ್ಲದು. ಇಂತಹ ಕಿಟ್ ಗಳ ಮಾರಾಟ ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಔಷಧಿ ನಿಯಂತ್ರಣ ಇಲಾಖೆ ಆದೇಶ ಹೊರಡಿಸಿದೆ.
Key words: covid test kit – medical stores- sell-Warning