ಮೈಸೂರು,ಏಪ್ರಿಲ್,10,2021(www.justkannada.in) : ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಹಲವು ಕ್ರಮಕೈಗೊಂಡಿದೆ. ಪ್ರತಿದಿನ 6 ಸಾವಿರ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ. ತಾಲೂಕು ಮಟ್ಟದಲ್ಲೂ ಟೆಸ್ಟ್ ಕಾರ್ಯವನ್ನ ಹೆಚ್ಚಳ ಮಾಡಿದ್ದೇವೆ. ಮೈಸೂರಿನಲ್ಲಿ ಡೆತ್ ಕೇಸ್, ಹಿಂದೆಯೂ ಜಾಸ್ತಿ ಇತ್ತು , ಈಗಲು ಜಾಸ್ತಿ ಇದೆ. ಲಸಿಕಾ ಕೇಂದ್ರಗಳನ್ನು ಹೆಚ್ಚಿಸಿದ್ದೇವೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ರಾಜ್ಯ ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಿದೆ ಎಂದು ತಿಳಿಸಿದರು.
ಕೊರೊನಾ ನಿರ್ವಹಣೆ, ಸಾರ್ವಜನಿಕರ ಸಹಕಾರ, ಕೋವಿಡ್ ನಿಯಂತ್ರಣದ ಬಗ್ಗೆ ಚರ್ಚೆ, ಸಂವಾದ ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ಪತ್ರಕರ್ತರ ಸಂಘದಿಂದ ಗೌರವ ಸನ್ಮಾನ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಸುಬ್ರಮಣ್ಯ ಸೇರಿ ಮತ್ತಿತರು ಉಪಸ್ಥಿತರಿದ್ದರು.
key words : covid-control-sheriff-Many actions-District Collector-Rohini Sindhuri