ದೋಸ್ತಿ ನಾಯಕರಿಗೆ ಸೆಡ್ಡು: ‘ಕೈ’ ಸೇರ್ಪಡೆಗೆ ಮುಂದಾದ  ಸಿಪಿ ಯೋಗೇಶ್ವರ್

ಬೆಂಗಳೂರು,ಅಕ್ಟೋಬರ್,23,2024 (www.justkannada.in): ಚನ್ನಪಟ್ಟಣ ವಿಧಾನಸಭಾ ಉಪಚುನಾವಣಾ ರಂಗೇರಿದ್ದು ಈ ಮಧ್ಯೆ ಕ್ಷಿಪ್ರ ರಾಜಕೀಯ ಬೆಳವಣಿಗೆಯಿಂದು ನಡೆದಿದೆ. ಮೈತ್ರಿ ಟಿಕೆಟ್ ಕೈತಪ್ಪುವ ಸಾಧ್ಯತೆಯಿಂದಾಗಿ ಬಿಜೆಪಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿ.ಪಿ. ಯೋಗೇಶ್ವರ್​ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಕಾಣಿಸಿಕೊಂಡಿದ್ದು ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ಸಿ.ಪಿ. ಯೋಗೇಶ್ವರ್​ ಅವರು ಇಂದು (ಅ.23) ಬೆಳಗ್ಗೆ ಡಿ.ಕೆ. ಶಿವಕುಮಾರ್​ ನಿವಾಸದಲ್ಲಿ ಕಾಣಿಸಿಕೊಂಡಿದ್ದು, ಇಬ್ಬರು ಒಟ್ಟಿಗೆ ಕಾರಿನಲ್ಲಿ ಪ್ರಯಾಣಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಅವರನ್ನ ಭೇಟಿಯಾಗಿದ್ದಾರೆ. ಈ ಮೂಲಕ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದೆ.

ಅ.21ರಂದು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿದ ಯೋಗೇಶ್ವರ್​ ಅವರು ತಮ್ಮ ರಾಜೀನಾಮೆ ಪತ್ರವನ್ನು ನೀಡಿದರು.

Key words: CP Yogeshwar, join, congress, channapatna