ಮೈಸೂರು,ಜ,5,2020(www.justkannada.in): ಮೈಸೂರು-ಟಿ.ನರಸೀಪುರ ರಸ್ತೆಯ ವರುಣ ಕೆರೆ ಸಮೀಪ ರಸ್ತೆಯಲ್ಲಿ ಬಿರುಕು ಬಿಟ್ಟು ವಾಹನಗಳ ಸಂಚಾರಕ್ಕೆ ಅಡಚಣೆಯಾಗುತ್ತಿರುವ ಹಿನ್ನೆಲೆ ಕಾಮಗಾರಿ ಬೇಗ ಪೂರ್ಣಗೊಳಿಸುವಂತೆ ಶಾಸಕ ಯತೀಂದ್ರ ಸಿದ್ಧರಾಮಯ್ಯ ಸೂಚನೆ ನೀಡಿದರು.
ಇನ್ನೂ ಬಿರುಕುಬಿಟ್ಟಿರುವ ರಸ್ತೆ ಸಂಪೂರ್ಣವಾಗಿ ರಿಪೇರಿಯಾಗದೇ ಸಂಚಾರಕ್ಕೆ ಅಡಚಣೆಯಾಗುತ್ತಿರುವುದರಿಂದ ವರುಣ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಮೂರು ವರ್ಷಗಳಿಂದ ಒಂದು ಕಿ.ಮೀ. ಅಂತರದಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆಯಾಗುತ್ತಿರುವುದರಿಂದ ಹಲವಾರು ಭಾರಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನ ರಸ್ತೆ ಸರಿಪಡಿಸುವಂತೆ ವಾಹನ ಸವಾರರು ಒತ್ತಾಯಿಸಿದ್ದರು.
ಕುಸಿದು ಬಿದ್ದಿರುವ ರಸ್ತೆಯನ್ನು ಸರಿಪಡಿಸಿಕೊಡಿ ಎಂದ ಒತ್ತಾಯಿಸಿದ್ದ ಹಿನ್ನಲೆ. ವರುಣ ಕೆರೆ ಮೈಸೂರು – ನರಸೀಪುರ ರಾಷ್ಟ್ರೀಯ ಹೆದ್ದಾರಿ ವರುಣ ಕೆರೆಯ ಮುಖ್ಯ ರಸ್ತೆಯ ದುರಸ್ತಿ ಕಾಮಗಾರಿಯನ್ನು ಶಾಸಕ ಯತೀಂದ್ರ ಸಿದ್ಧರಾಮಯ್ಯ ಪರಿಶೀಲಿಸಿದರು. ದಿನನಿತ್ಯ ಆಗುತ್ತಿರುವ ಸಂಚಾರ ದಟ್ಟಣೆಯನ್ನ ಗಮನದಲ್ಲಿಟ್ಟುಕೊಂಡು ಪ್ರಗತಿಯಲ್ಲಿರುವ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಮುಕ್ತ ಸಂಚಾರಕ್ಕೆ ಅನುವು ಮಾಡಬೇಕೆಂದು ಯತೀಂದ್ರ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡನ್ ಸೂಚನೆ ನೀಡಿದರು. ಮೂರು ವರ್ಷಗಳಿಂದ ಕುಂಟುತ್ತ ಸಾಗುತ್ತಿರುವ ಕಾಮಗಾರಿ, ಮುಂದಿನ ದಿನಗಳಲ್ಲಿ ವೇಗ ಪಡೆದುಕೊಳ್ಳಲಿದ್ಯಾ ಎಂಬುದು ಪ್ರಶ್ನೆಯಾಗಿದೆ.
Key words: Cracks – Mysore-T.Narasipura- road-MLA -Yatindra Siddaramaiah -visit