ಬೆಂಗಳೂರು,ಸೆಪ್ಟಂಬರ್,20,2023(www.justkannada.in): ಪಕ್ಷದ ಹಿತದೃಷ್ಠಿಯಿಂದ ಮೂರು ಡಿಸಿಎಂ ಹುದ್ದೆ ಸೃಷ್ಟಿಸಬೇಕು ಎಂಬ ಅಭಿಪ್ರಾಯಕ್ಕೆ ನಾನು ಈಗಲೂ ಬದ್ಧನಾಗಿದ್ದೇನೆ. ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎಸ್ ರಾಜಣ್ಣ, ಸಮುದಾಯವಾರು ಮೂರು ಡಿಸಿಎಂ ಆಗಬೇಕು ಅನ್ನುವ ವಿಚಾರದಲ್ಲಿ ತಪ್ಪೇನಿದೆ? ಪಕ್ಷಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ಮಾತು ಹೇಳಿದ್ದೇನೆ. ಈ ನಿಟ್ಟಿನಲ್ಲಿ ಯಾವುದೇ ಚಾಲೆಂಜ್ ಎದುರಿಸಲು ನಾನು ಸಿದ್ದ ಎಂದು ತಿಳಿಸಿದರು.
ಮೂರು ಡಿಸಿಎಂ ವಿಚಾರ ಕುರಿತು ಸಿಎಂ ಸಿದ್ದರಾಮಯ್ಯ ಅವರು ಈ ಮಾತನ್ನು ನನ್ನಿಂದ ಹೇಳಿಸುತ್ತಿದ್ದಾರೆ ಎಂಬುದು ತಪ್ಪು. ನಾನು ಈ ವಿಚಾರವಾಗಿ ಸಿದ್ದರಾಮಯ್ಯರನ್ನು ಭೇಟಿ ಮಾಡಿಲ್ಲ ಈ ರೀತಿಯಲ್ಲಿ ಹೆಚ್ಚು ಡಿಸಿಎಂ ಹುದ್ದೆ ಸೃಷ್ಟಿ ಮಾಡಿದ್ರೆ ಡಿಸಿಎಂ ಡಿಕೆ ಶಿವಕುಮಾರ್ ಪ್ರಾಮುಖ್ಯತೆ ಕಡಿಮೆ ಮಾಡಲಾಗುತ್ತದೆ ಅನ್ನೋದೂ ತಪ್ಪು. ಪಕ್ಷದ ಹಿತದೃಷ್ಟಿಯಿಂದ ಹೈಕಮಾಂಡ್ ಮುಂದೆ ಪ್ರಸ್ತಾಪ ಮಾಡಿದ್ದೇನೆ. ಅವರಿಗೆ ಸರಿ ಅನ್ನಿಸಿದರೆ ಮಾಡ್ತಾರೆ. ಬೇಡ ಅಂದರೆ ಬಿಡುತ್ತಾರೆ ಎಂದು ಸಚಿವ ಕೆ.ಎನ್ ರಾಜಣ್ಣ ಸ್ಪಷ್ಟಪಡಿಸಿದರು.
Key words: creation –three- DCM posts – Minister- KN Rajanna.