ಬೆಂಗಳೂರು, ಅಕ್ಟೋಬರ್ 08, 2023 (www.justkannada.in): ವಿಶ್ವಕಪ್ ಕ್ರಿಕೆಟ್ ನಲ್ಲಿ ಇಂದು ಟೀಂ ಇಂಡಿಯಾ ಪ್ರಬಲ ಆಸ್ಟ್ರೇಲಿಯಾವನ್ನು ಎದುರಿಸಲಿದೆ.
ಏಕದಿನ ಪಂದ್ಯಗಳ ಸರಣಿಯಲ್ಲಿ 2-1 ರಿಂದ ಮಣಿಸಿದ್ದ ಭಾರತ ಗೆಲುವಿನ ಆತ್ಮವಿಶ್ವಾಸದಿಂದಲೇ ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.
ಶುಭಮನ್ ಗಿಲ್ ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಹೀಗಾಗಿ ಇವರ ಇಶಾನ್ ಕಿಶನ್ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ಶ್ರೇಯಶ್ ಅಯ್ಯರ್ ಆಡಲಿದ್ದಾರೆ.
ಫಾರ್ಮ್ನಲ್ಲಿರುವ ಕನ್ನಡಿಗ ಕೆ.ಎಲ್ ರಾಹುಲ್ ಕೀಪಿಂಗ್ ಹೊಣೆ ಹೊರಲಿದ್ದಾರೆ. ಅವರು 5ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಸಾಧ್ಯತೆ ಇದೆ.
ಅಕ್ಷರ್ ಪಟೇಲ್ ಗಾಯಗೊಂಡು ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ಕಾರಣ ತಂಡದಲ್ಲಿ ಅವಕಾಶ ಪಡೆದ ಆರ್.ಅಶ್ವಿನ್ ಈ ಪಂದ್ಯದಲ್ಲಿ ಆಡುವುದು ಖಚಿತ ಎನ್ನಲಾಗಿದೆ.