ಬೆಂಗಳೂರು, ಆಗಸ್ಟ್ 21, 2020 (www.justkannada.in): ಗಾಯಕ ಎಸ್.ಬಿ.ಬಾಲಸುಬ್ರಹ್ಮಣ್ಯಂ ಅವರನ್ನು ತೀವ್ರ ನಿಗಾ ಘಟಕದಲ್ಲಿ ಕೃತ ಉಸಿರಾಟ ವ್ಯವಸ್ಥೆಯಲ್ಲಿ ಅವರನ್ನು ಇಡಲಾಗಿದೆ.
ಸದ್ಯ ಗಂಭೀರ ಸ್ಥಿತಿಯಲ್ಲೇ ಅವರು ಮುಂದುವರಿದಿದ್ದಾರೆ ಎಂದು ಎಂಜಿಎಂ ಆಸ್ಪತ್ರೆಯ ಅಧಿಕೃತ ಬುಲೆಟಿನ್ನಲ್ಲಿ ಮಾಹಿತಿ ನೀಡಲಾಗಿದೆ.
ಆಸ್ಪತ್ರೆಯ ವೈದ್ಯರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ತಜ್ಞರ ಜೊತೆ ನಿರಂತರ ಸಂವಹನ ನಡೆಸುತ್ತಿದ್ದು, ಅವರ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಎಂಜಿಎಂ ಆಸ್ಪತ್ರೆ ಬುಲೆಟಿನ್ ತಿಳಿಸಿದೆ.