ಬೆಂಗಳೂರು,ಡಿಸೆಂಬರ್,27,2024 (www.justkannada.in): ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾಗಿ ಎರಡನೆಯ ಅವಧಿಗೆ ಸಿ.ಎಸ್ ಷಡಾಕ್ಷರಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮತ್ತು ಖಜಾಂಚಿ ಸ್ಥಾನಗಳಿಗೆ ಇಂದು ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಮತದಾನ ನಡೆದಿದ್ದು ಅಧ್ಯಕ್ಷರಾಗಿ ಎರಡನೆಯ ಅವಧಿಗೆ ಸಿ ಎಸ್ ಷಡಾಕ್ಷರಿ ಆಯ್ಕೆಯಾಗಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹುದ್ದೆಗೆ ಹಾಲಿ ಅಧ್ಯಕ್ಷ ಸಿ.ಎಸ್ ಷಡಕ್ಷರಿ ಹಾಗೂ ಸಂಘದ ಮಾಜಿ ಅಧ್ಯಕ್ಷ ಬಿಪಿ ಮಂಜೇಗೌಡ ಅವರ ಸೋದರ ಬಿಪಿ ಕೃಷ್ಣೆಗೌಡ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.
ಸಿಎಸ್ ಷಡಾಕ್ಷರಿ 507 ಮತಗಳನ್ನ ಪಡೆದು 2ನೇ ಬಾರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಬಿಪಿ ಕೃಷ್ಣೆಗೌಡ 442 ಮತಗಳನ್ನ ಪಡೆದು ಸೋಲನುಭವಿಸಿದ್ದಾರೆ.
ನಗರದ ಕಬ್ಬನ್ ಉದ್ಯಾನದಲ್ಲಿರುವ ಸಂಘದ ಕಚೇರಿ ಆವರಣದಲ್ಲಿ ಚುನಾವಣಾ ಪ್ರಕ್ರಿಯೆ ನಡೆದಿದ್ದು ಸಂಘದ 971 ಪ್ರತಿನಿಧಿಗಳು ಅಧ್ಯಕ್ಷ ಹಾಗೂ ಖಜಾಂಚಿ ಆಯ್ಕೆಗೆ ಮತ ಚಲಾವಣೆಗೆ ಹಕ್ಕು ಹೊಂದಿದ್ದರು.
Key words: CS Shadakshari, elected, Karnataka State Government Employees Association, President