ಬೆಳಗಾವಿ,ಡಿಸೆಂಬರ್,20,2024 (www.justkannada.in): ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಎಂಎಲ್ ಸಿ ಸಿ.ಟಿ ರವಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪ ಪ್ರಕರಣವನ್ನ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿ ಬೆಳಗಾವಿಯ ಜೆಎಂಎಫ್ ಸಿ ಕೋರ್ಟ್ ಆದೇಶ ಹೊರಡಿಸಿದೆ.
ಆಕ್ಷೇಪಾರ್ಹ ಪದ ಬಳಕೆ ಆರೋಪದ ಮೇಲೆ ಎಂಎಲ್ ಸಿ ಸಿ.ಟಿ ರವಿ ವಿರುದ್ಧ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹಿರೇಬಾಗೇವಾಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಸಿಟಿ ರವಿ ಅವರನ್ನು ನಿನ್ನೆ ರಾತ್ರಿ ಬಂಧಿಸಿ ಇಂದು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಈ ವೇಳೆ ಸಿಟಿ ರವಿ ಅವರ ಪರ ವಕೀಲ ಎಂಬಿ ಜಿರಲಿ ಅವರು ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ಬಳಿಕ ವಿಚಾರಣೆಯನ್ನ ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಮುಂದೂಡಲಾಗಿತ್ತು. ಇದೀಗ ಪ್ರಕರಣವನ್ನ ಜೆಎಂಎಫ್‌ಸಿ ಕೋರ್ಟ್ ನ ಜಡ್ಜ್ ಡಿಸೋಜಾ ಅವರು ಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಯಿಸಿ ಆದೇಶಿಸಿದ್ದು ಪೊಲೀಸರು ಸಿ ಟಿ ರವಿ ಅವರನ್ನ ಬೆಂಗಳೂರಿಗೆ ಕರೆದೊಯ್ಯಲಿದ್ದಾರೆ.
Key words: CT Ravi, case, transferred, Bangalore Representative Court