ಸಿ.ಟಿ ರವಿ ಅಸಭ್ಯ ಪದ ಬಳಕೆ ಕ್ರಿಮಿನಲ್ ಅಪರಾಧ: ಸಿಎಂ ಸಿದ್ದರಾಮಯ್ಯ

ಬೆಳಗಾವಿ ,ಡಿಸೆಂಬರ್ 19, 2024 (www.justkannada.in): ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಅವರ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ. ಟಿ ರವಿ ಆಕ್ಷೇಪಾರ್ಹ ಪದ ಬಳಕೆ ವಿಚಾರ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು , ಅದು ಕ್ರಿಮಿನಲ್ ಅಪರಾಧವಾಗಿದೆ. ಈ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವಿಧಾನಪರಿಷತ್ ಸಭಾಪತಿಯವರಿಗೆ ದೂರು ನೀಡಿರುವ ಬಗ್ಗೆ ಮಾಹಿತಿ ಇಲ್ಲ  ಎಂದು ತಿಳಿಸಿದರು.

ಸಿ. ಟಿ.ರವಿ ಅವರು ಆರೋಪವನ್ನು ಅಲ್ಲಗಳೆದಿರುವ  ಬಗ್ಗೆ ಪ್ರತಿಕ್ರಿಯೆ ನೀಡಿ, ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Key words: CT Ravi, obscene language, criminal offence, CM Siddaramaiah