ಬೆಳಗಾವಿ, ಡಿಸೆಂಬರ್,19,2024 (www.justkannada.in): ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಈ ಸಂಬಂಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಸಿ.ಟಿ.ರವಿ ಅವರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿಯ ಸುವರ್ಣ ಸೌಧದ ಬಳಿ ಎಂಎಲ್ ಸಿ ಸಿ.ಟಿ.ರವಿ ತಮ್ಮ ಕಾರಿನಲ್ಲಿ ಆಗಮಿಸುತ್ತಿದ್ದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಂಬಲಿಗರು ಸಿ.ಟಿ.ರವಿ ಕಾರನ್ನು ತಡೆದು, ಮುತ್ತಿಗೆ ಹಾಕಿದ್ದಾರೆ. ಈ ವೇಳೆ ಪೊಲೀಸರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರನ್ನು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ ಸುವರ್ಣ ಸೌಧದ ಬಳಿ ಲಕ್ಷ್ಮೀ ಹೆಬ್ಬಾಳಕರ್ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದು, ಎಂಎಲ್ ಸಿ ಸಿ.ಟಿ.ರವಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ನಡುವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಎಂಎಲ್ ಸಿ ಸಿಟಿ ರವಿ ವಿರುದ್ದ ದೂರು ನೀಡಿದ್ದಾರೆ.
Key words: CT Ravi, besieged, Lakshmi Hebbalkar, supporters