ಸೈಬರ್ ಆವರಣ- ಭೌತಿಕ ಆವರಣ ಒಗ್ಗೂಡಿಸುವಿಕೆಯೇ ಭವಿಷ್ಯದ ತಾಂತ್ರಿಕತೆ -ಡಿಸಿಎಂ ಡಾ.ಅಶ್ವಥ್ ನಾರಾಯಣ್ ಅಭಿಪ್ರಾಯ…

ಬೆಂಗಳೂರು,ಸೆಪ್ಟಂಬರ್,14,2020(www.justkannada.in):  ಸೈಬರ್ ಆವರಣ ಮತ್ತು ಭೌತಿಕ ಆವರಣದ ಒಟ್ಟುಗೂಡಿಸುವಿಕೆಯು ಮುಂಬರುವ ದಿನಗಳಲ್ಲಿ ಆರ್ಥಿಕತೆ ಸೇರಿದಂತೆ ಎಲ್ಲಾ ವಲಯಗಳನ್ನು ಅಗಾಧವಾಗಿ ಪ್ರಭಾವಿಸುವ ತಾಂತ್ರಿಕತೆ ಆಗಲಿದೆ ಎಂದು ಐಟಿ/ ಬಿಟಿ, ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ಅವರು ಹೇಳಿದರು.jk-logo-justkannada-logo

ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ) ಆಯೋಜಿಸಿರುವ “ಭಾರತೀಯ ನಾವೀನ್ಯತಾ ಶೃಂಗಸಭೆ-2020’ ಅನ್ನು ಆನ್ ಲೈನ್ ಮೂಲಕ ಸೋಮವಾರ ಉದ್ಘಾಟಿಸಿ  ಡಿಸಿಎಂ ಅಶ್ವಥ್ ನಾರಾಯಣ್ ಮಾತನಾಡಿದರು. ನಾಲ್ಕು ದಿನಗಳ ಕಾಲ ನಡೆಯುವ ಈ ಶೃಂಗಸಭೆಯಲ್ಲಿ “ಕ್ಷಮತೆ & ಪುನಶ್ಚೈತನ್ಯ: ಐದನೇ ತಲೆಮಾರು-5.0ಕ್ಕೆ  ನಾವೀನ್ಯತೆ’ ಕುರಿತು ವಿಷಯ ಮಂಡನೆ, ಚರ್ಚೆ, ಸಂವಾದ ಹಾಗೂ ಸಮಾಲೋಚನೆಗಳು ನಡೆಯಲಿವೆ.

ಭೌತಿಕ ಆವರಣದಲ್ಲಿ ಅಳವಡಿಸಲಾಗುವ ಸೆನ್ಸಾರ್ ಗಳು ಕಲೆಹಾಕುವ ಬೃಹತ್ ಪ್ರಮಾಣದ ದತ್ತಾಂಶಗಳನ್ನು ಕೃತಕ ಬುದ್ಧಿಮತ್ತೆಯ ನೆರವಿನಿಂದ ನಿಖರವಾಗಿ ವಿಶ್ಲೇಷಿಸಬಲ್ಲ ತಂತ್ರಜ್ಞಾನ ಇದಾಗಿರುತ್ತದೆ. ವೈದ್ಯಕೀಯ ಕ್ಷೇತ್ರ, ಕೃಷಿ ಕ್ಷೇತ್ರ ಹಾಗೂ ವಿಶೇಷವಾಗಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಹಿನ್ನೆಲೆಯಲ್ಲಿ ಶೈಕ್ಷಣೀಯ ಕ್ಷೇತ್ರದ ಮೇಲೂ ಇದು ಹೆಚ್ಚಿನ ಪ್ರಭಾವ ಬೀರಲಿದೆ. ಮುಂದಿನ 2 ಅಥವಾ 3 ತಿಂಗಳಲ್ಲಿ ನಾವು ಈ ದಿಸೆಯಲ್ಲಿ ಮೊದಲ ಹೆಜ್ಜೆ ಇರಿಸಲಿದ್ದೇವೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ವಿವರಿಸಿದರು.

ಸೈಬರ್ ಆವರಣ ಹಾಗೂ ಭೌತಿಕ ಆವರಣದ ಒಟ್ಟುಗೂಡಿಸುವಿಕೆಯನ್ನು ಅಳವಡಿಸಿಕೊಳ್ಳುವುದರಿಂದ ಸರ್ಕಾರದ ಕಾರ್ಯಕ್ಷಮತೆ,  ಉತ್ತರದಾಯತ್ವ, ಪಾರದರ್ಶಕತೆ, ಸಾಧನೆ ಅದೆಷ್ಟೋ ಪಟ್ಟು ಅಧಿಕವಾಗುವ ಸಾಧ್ಯತೆ ಇದೆ.  ಇದು ಅಲ್ಪಾವಧಿಯಲ್ಲಿ “ಅಸ್ತಿತ್ವ ಉಳಿಸಿಕೊಳ್ಳುವ” ಕಾರ್ಯತಂತ್ರ ಹಾಗೂ ಮಧ್ಯಮಾವಧಿಯಲ್ಲಿ “ಅಭಿವೃದ್ಧಿ” ಸಾಧಿಸುವ ಕಾರ್ಯತಂತ್ರದ ಶ್ರೇಷ್ಠ ಸಮನ್ವಯತೆಯಿಂದ ಕೂಡಿದ್ದಾಗಿದೆ ಎಂದು ಅಶ್ವತ್ಥ ನಾರಾಯಣ ಅಭಿಪ್ರಾಯಪಟ್ಟರು.

ಕಳೆದ ಒಂದು ವರ್ಷದಲ್ಲಿ ಸರ್ಕಾರವು ಉದ್ಯಮಶೀಲತೆ ಉತ್ತೇಜಿಸಲು ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಎಲ್ಲಾ ರೀತಿಯ ಉದ್ಯಮಗಳನ್ನು ಬೆಳೆಸಲು ಏನೆಲ್ಲಾ ಸಾಧ್ಯವೋ ಅವೆಲ್ಲವನ್ನೂ ಮಾಡುವ ಇಚ್ಛಾಶಕ್ತಿಯನ್ನು ಸರ್ಕಾರ ಹೊಂದಿದೆ ಎಂದರು.cyber-premises-physical-enclosures-technology-dcm-dr-ashwath-narayan-opinion

ಐಟಿ/ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ, ಭಾರತೀಯ ಕೈಗಾರಿಕೆಗಳ ಒಕ್ಕೂಟದ (ಸಿಐಐ) ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್, ಭಾರತದ ಸಾಫ್ಟ್ ವೇರ್ ಟೆಕ್ನಾಲಜಿ ಪಾರ್ಕ್ಸ್ ನ ಮಹಾ ನಿರ್ದೇಶಕ ಡಾ.ಓಂಕಾರ್ ರಾಯ್, ಸಿಐಐ ಕರ್ನಾಟಕ ರಾಜ್ಯ ಮಂಡಳಿಯ ಅಧ್ಯಕ್ಷ ಸಂದೀಪ್ ಸಿಂಗ್, ಉಪಾಧ್ಯಕ್ಷ ರಮೇಶ್ ರಾಮದುರೈ ಅವರು ಕಾರ್ಯಕ್ರಮದಲ್ಲಿ ಹಾಜರಿದ್ದು ಮಾತನಾಡಿದರು.

summary

India Innovative Summit 2020
The convergence of Cyber Space & Physical Space is the technology of the near future- DyCM Dr.C.N.Ashwatha Narayaya

Bengaluru: The convergence of cyberspace and physical space will be the upcoming technology which is going to have a huge impact on all the sectors including the economy, said the Deputy Chief Minister Dr. C.N.Ashwatha Narayana, who is also the minister for IT/BT and Science & Technology.

He said this while inaugurating the “ India Innovative Summit-2020’ organized by CII on Monday through an online platform. The summit which has “Resilience % Resurgence” as its theme will be held for 4 days and discussions, interactions & deliberations will be pondered around the theme.

This convergence technology makes use of emerging AI (artificial intelligence) to accurately analyze the larger amount of data that would be collected by the sensors deployed in the physical space, he explained.

He further said that the convergence would lead to a drastic impact on medical, agriculture, and other sectors and would impact the education sector as well in a bigger way, particularly in the backdrop of new education policy which was going to be implemented.

The government is very eager to adopt and encourage this convergence technology. This is expected to enable the government to enhance its resilience, accountability, transparency, and performance several times higher and this a very good blend of short term “survival” strategy and midterm “growth strategy” Ashwatha Narayana said.

Dr. E V Ramana Reddy, IAS, Additional Chief Secretary, IT and BT & Science & Technology & Higher Education, Govt of Karnataka, Dr. Omkar Rai, Director General, Software Technology Parks of India, Mr. Kris Gopalakrishnan, Chairman, CII India Innovation Summit & Chairman, Mr. Sandeep Singh, Chairman, CII Karnataka State Council, Mr. Ramesh Ramadurai, Vice Chairman, CII Karnataka State Council & Managing Director, 3M India Ltd attended and spoke in the session.

Key words: Cyber -premises – Physical- enclosures – technology-DCM- Dr Ashwath Narayan -Opinion.