ದಕ್ಷಿಣ ಕನ್ನಡ,ಜುಲೈ,29,2022(www.justkannada.in): ಕರಾವಳಿ ಭಾಗದಲ್ಲಿ ಕಳೆದ 10 ದಿನಗಳಲ್ಲಿ ಮೂರು ಕೊಲೆಗಳಾಗಿದ್ದು, ಇದರಿಂದಾಗಿ ಆತಂಕ ಭಯ ಶುರುವಾಗಿದೆ. ಈ ನಡುವೆ ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್, ಮುಲ್ಕಿ ಪೊಲೀಸ್ ಠಾಣೆ, ಬಜ್ಪೆ, ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಇದೀಗ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಭೀತಿ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಗೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರವೇಶ ನಿರ್ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಮೋಲ್ ಮುತಾಲಕ್ ಗೆ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶ ನಿರ್ಬಂಧ ವಿಧಿಸುವಂತೆ ಪೊಲೀಸ್ ಅಧೀಕ್ಷಕರು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಅವರಿಗೆ ಮನವಿ ಮಾಡಿದ್ದರು.
ಮನವಿಗೆ ಸ್ಪಂದಿಸಿರುವ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಅವರು ಇದೀಗ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ, ಸುಳ್ಯದಲ್ಲಿ ಪ್ರಮೋದ್ ಮುತಾಲಿಕ್ ಪ್ರವೇಶಕ್ಕೆ ನಿಷೇಧ ವಿಧಿಸಿ ಆದೇಶಿಸಿದ್ದಾರೆ ಎನ್ನಲಾಗಿದೆ.
Key words: Dakshina Kannada- district- entry- ban -Pramod Muthalik.