ಮಂಗಳೂರು,ಆ,8,2020(www.justkannada.in): ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿರುವ ದಕ್ಷಿಣ ಕನ್ನಡ ಜಿಲ್ಲೆಗೆ ವಿಪತ್ತು ನಿರ್ವಹಣೆಗೆ ಹೆಚ್ಚುವರಿಯಾಗಿ 5 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ಮಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಆರ್.ಅಶೋಕ್, ನೆರೆ ಪೀಡಿತ ಪ್ರದೇಶಗಳಲ್ಲಿ ಕಾಳಜಿ ಕೇಂದ್ರಗಳನ್ನ ತೆರೆಯಲಾಗಿದೆ. ಸಂತ್ರಸ್ಥರಿಗೆ ಪೌಷ್ಠಿಕ ಆಹಾರ ನೀಡಲು ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ವಿಪತ್ತು ನಿರ್ವಹಣೆಗೆ 5 ಕೋಟಿ ರೂ ಹೆಚ್ಚುವರಿಯಾಗಿ ನೀಡಲಾಗಿದೆ. ಜಿಲ್ಲೆಯ ವಿಪತ್ತು ನಿರ್ವಹಣೆ ಖಾತೆಯಲ್ಲಿ 23 ಕೋಟಿ ರೂ ಇದೆ ಎಂದು ಮಾಹಿತಿ ನೀಡಿದರು.
ಇನ್ನು ನೆರೆ ಪೀಡಿತ ಪ್ರದೇಶಗಳಲ್ಲಿರುವ ಜನರನ್ನ ಒತ್ತಾಯಪೂರ್ವಕವಾಗಿ ಬೇರೆಡೆಗೆ ಸ್ಥಳಾಂತರಿಸಲಾಗುತ್ತಿದೆ. ಸ್ಥಳಾಂತರಿಸಲು ವಿರೋಧಿಸಿದರೇ ಅಂತವರ ವಿರುದ್ದ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದರು.
Key words: Dakshina Kannada –district- releases -Rs 5 crore – disaster management- minister- R.ashok