ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು,ಡಿಸೆಂಬರ್,6,2024 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ  ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ.

ಇಂದು ಹೈಕೋರ್ಟ್ ನ್ಯಾ.ವಿಶ್ವಜಿತ್ ಶೆಟ್ಟಿ ನೇತೃತ್ವದ ಏಕಸದಸ್ಯ ಪೀಠದಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ಪೊಲೀಸರ ಪರ ಎಸ್ ಪಿಪಿ ವಾದ ಮಂಡಿಸಿ ನಟ ದರ್ಶನ್ ಗೆ ಜಾಮೀನು ನೀಡದಂತೆ ಮನವಿ ಮಾಡಿದರು. ವಿಚಾರಣೆಯನ್ನ ನ್ಯಾ.ವಿಶ್ವಜಿತ್ ಶೆಟ್ಟಿ ಅವರು ಡಿಸೆಂಬರ್ 9ರ ಸೋಮವಾರ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದರು.

ಪ್ರಕರಣ ಸಂಬಂಧ ಬೆನ್ನುನೋವು ಹಿನ್ನೆಲೆ ಚಿಕಿತ್ಸೆಗಾಗಿ ನಟ ದರ್ಶನ್ 6 ವಾರಗಳ ಕಾಲ ಮಧ್ಯಂತರ ಜಾಮೀನು ಪಡೆದಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

Key words: Actor, Darshan,  bail application, high court