ನಟ ದರ್ಶನ್ ಗೆ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಗ್ರೀನ್ ಸಿಗ್ನಲ್

ಬೆಂಗಳೂರು ,ಡಿಸೆಂಬರ್,30,2024 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ದರ್ಶನ್ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರಿಗೆ ಗೃಹ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.

ನಟ ದರ್ಶನ್  ಗೆ ಹೈಕೋರ್ಟ್ ಪೂರ್ಣ ಪ್ರಮಾಣದ ಜಾಮೀನು ನೀಡಿದ್ದು, ಬೆಂಗಳೂರು ಪೊಲೀಸರು ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲು  ಸಿದ್ದತೆ ನಡೆಸುತ್ತಿದ್ದಾರೆ.  ಮೆರಿಟ್ಸ್ ಆಫ್ ದಿ ಕೇಸ್’ ಮೇಲೆ ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಪೊಲೀಸರು ಸಿದ್ದತೆ ನಡೆಸಿದ್ದು, ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳ ಜಾಮೀನು ರದ್ದು ಕೋರಿ ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಲಿದ್ದಾರೆ.

ನಟ ದರ್ಶನ್ , ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳಿಗೆ ಹೈಕೋರ್ಟ್ ಇತ್ತೀಚೆಗೆ ಜಾಮೀನು ಮಂಜೂರು ಮಾಡಿತ್ತು. ಈ ಮಧ್ಯೆ  ನಟ ದರ್ಶನ್ ಸರ್ಜರಿ ಮಾಡಿಸಿಕೊಳ್ಳದೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಈ ಬೆನ್ನಲ್ಲೇ ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಲು ಸಿದ್ದತೆ ನಡೆಸಿದ್ದು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಗೃಹ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.

Key words: actor Darshan, appeal, Supreme Court, cancellation, bail