ನವದೆಹಲಿ, ನ,1,2019(www.justkannada.in): ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭಾ ಚುನಾವಣೆ ಬಳಿಕ ಇದೀಗ ಮತ್ತೊಂದು ರಾಜ್ಯಕ್ಕೆ ಚುನಾವಣಾ ದಿನಾಂಕ ನಿಗದಿಯಾಗಿದೆ. ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ.
ಇಂದು ಕೇಂದ್ರ ಚುನಾವಣಾ ಆಯುಕ್ತ ಸುನೀಲ್ ಅರೋರಾ ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಿದರು, ಜಾರ್ಖಂಡ್ ರಾಜ್ಯದ 81 ವಿಧಾನಸಭಾ ಕ್ಷೇತ್ರಗಳಿಗೆ ಐದು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಚುನಾವಣಾ ಫಲಿತಾಂಶ ಡಿಸೆಂಬರ್ 23 ರಂದು ಪ್ರಕಟವಾಗಲಿದೆ.
ನವೆಂಬರ್ 30 ರಂದು 13 ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆ ನಡೆಯಲಿದೆ. ಡಿಸೆಂಬರ್ 7 ರಂದು 20 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಹಾಗೆಯೇ ಮೂರನೇ ಹಂತದಲ್ಲಿ 17 ಕ್ಷೇತ್ರಗಳಿಗೆ ಡಿಸೆಂಬರ್ 12 ರಂದು ಮತದಾನ ನಡೆದರೇ 4ನೇ ಹಂತದಲ್ಲಿ 15 ಕ್ಷೇತ್ರಗಳಿಗೆ ಡಿಸೆಂಬರ್ 16 ರಂದು ವೋಟಿಂಗ್ ನಡೆಯಲಿದೆ. ಹಾಗೆಯೇ ಡಿಸೆಂಬರ್ 20 ರಂದು 5ನೇ ಹಂತದಲ್ಲಿ 16 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು ಡಿಸೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.
Key words: Date fix – Jharkhand –assembly- elections-central election Commission