ಬೆಂಗಳೂರು,ಸೆಪ್ಟಂಬರ್,19,2020(www.justkannada.in): ಡಿಸಿಎಂ ಅಶ್ವಥ್ ನಾರಾಯಣ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು ಈ ಬಗ್ಗೆ ಅವರೇ ಟ್ವಿಟ್ಟರ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಡಿಸಿಎಂ ಅಶ್ವಥ್ ನಾರಾಯಣ್, ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಈ ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ ಎಂದಿದ್ದಾರೆ.
ಹಾಗೆಯೇ ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಸಲಹೆ ನೀಡಿದ್ದಾರೆ. ಇತ್ತೀಚೆಗೆ ಸಿಎಂ ಬಿಎಸ್ ಯಡಿಯೂರಪ್ಪ, ಸಚಿವ ಎಸ್.ಟಿ ಸೋಮಶೇಖರ್, ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ರಾಜಕೀಯ ವ್ಯಕ್ತಿಗಳಿಗೆ ಕೊರೋನಾ ಸೋಂಕು ತಗುಲಿ ಗುಣಮುಖರಾಗಿದ್ದಾರೆ.
ಸೆಪ್ಟಂಬರ್ 21 ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದ್ದು ಈ ಹಿನ್ನೆಲೆ ಸದನಕ್ಕೆ ಹಾಜರಾಗುವ ಮುನ್ನ ಎಲ್ಲರೂ ಕೊರೋನಾ ಟೆಸ್ಟ್ ಮಾಡಿಸಿ ವರದಿ ತರುವಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚನೆ ನೀಡಿದ್ದರು.
Key words: DCM-Ashwath narayan-corona-positive-confirm