ಬೆಂಗಳೂರು,ಮೇ,26,2021(www.justkannada.in): ರಾಜ್ಯದಲ್ಲಿ ಕೊರೋನಾ 2ನೇ ಅಲೆ ವೇಗವಾಗಿ ಹರಡುತ್ತಿರುವ ಹಿನ್ನೆಲೆ ಈಗಾಗಲೇ ಜೂನ್ 7ರವರೆಗೆ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ವಿಸ್ತರಿಸುವ ಬಗ್ಗೆ ಡಿಸಿಎಂ ಅಶ್ವಥ್ ನಾರಾಯಣ್ ಪ್ರತಿಕ್ರಿಯಿಸಿದ್ದಾರೆ.
ಸದ್ಯದ ಪರಿಸ್ಥಿತಿಯಲ್ಲಿ ಲಾಕ್ ಡೌನ್ ವಿಸ್ತರಿಸುವ ನಿರ್ಧಾರ ಮಾಡಿಲ್ಲ. ಸದ್ಯ ಜೂನ್ 7ರವರೆಗೆ ಲಾಕ್ ಡೌನ್ ಜಾರಿಯಲ್ಲಿದೆ. ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ. ಹೀಗಾಗಿ ನಿಧಾನವಾಗಿ ಅನ್ ಲಾಕ್ ಪ್ರಕ್ರಿಯೆಯನ್ನು ಆರಂಭಿಸಲಾಗುತ್ತದೆ ಎಂದು ಡಿಸಿಎಂ ಅಶ್ವತ್ ನಾರಾಯಣ್ ತಿಳಿಸಿದ್ದಾರೆ.
ಇನ್ನು ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಚರ್ಚೆಯಲ್ಲಿರುವ ಹಿನ್ನೆಲೆ ಈ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಅಶ್ವಥ್ ನಾರಾಯಣ್, ಸಿಎಂ ಬದಲಾವಣೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಸಿಎಂ ಬಿಎಸ್ ವೈ ನಮ್ಮ ನಾಯಕರು. ಅವರ ನೇತೃತ್ವದಲ್ಲೇ ಕೊರೋನಾ ನಿರ್ವಹಣೆ ಮಾಡಲಾಗುತ್ತಿದೆ. ಇನ್ನು ಶಾಸಕಾಂಗ ಸಭೆ ಕರೆದ ಬಗ್ಗೆಯೂ ಮಾಹಿತಿ ಇಲ್ಲ ಎಂದರು.
Key words: DCM -Ashwath Narayan- extension – lockdown- after -June 7.