ಬೆಂಗಳೂರು,ಮಾರ್ಚ್,2,2021(www.justkannada.in): ಕರ್ನಾಟಕ ರಾಜ್ಯದ ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ (ಇ.ಆರ್.&ಡಿ) ನೀತಿ-2021 ಯನ್ನು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ-ತಂತ್ರಜ್ಞಾನ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಂಗಳವಾರ ಅನಾವರಣಗೊಳಿಸಿದರು.
ರಾಜ್ಯದ ಪ್ರಗತಿಗೆ ಹೊಸ ದಿಕ್ಕು ತೋರುವ ಈ ನೀತಿಯನ್ನು ಇಡೀ ಭಾರತದಲ್ಲಿಯೇ ಕರ್ನಾಟಕ ರಾಜ್ಯವು ಮೊತ್ತ ಮೊದಲ ಬಾರಿಗೆ ರೂಪಿಸಿ ಅಳವಡಿಸಿಕೊಳ್ಳುತ್ತಿದೆ ಎಂದು ನೀತಿಯನ್ನು ಅನಾವರಣಗೊಳಿಸಿದ ನಂತರ ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದರು.
ನಮ್ಮ ದೇಶದಲ್ಲಿ ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ವಲಯವು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು 2018ರಿಂದ ವಾರ್ಷಿಕವಾಗಿ ಸರಾಸರಿ 12.8% ಬೆಳವಣಿಗೆ ಸಾಧಿಸುತ್ತಿದೆ. ಇದೇ ವೇಳೆ ಈ ವಲಯದ ಮೇಲಿನ ಜಾಗತಿಕ ವೆಚ್ಚವು 2025ರ ಹೊತ್ತಿಗೆ 2 ಟ್ರಿಲಿಯನ್ ಡಾಲರ್‌ಗಳಷ್ಟಾಗುವ ಅಂದಾಜಿದ್ದು, ಈ ವಹಿವಾಟು ಅವಕಾಶಗಳಿಗೆ ಅನುಗುಣವಾಗಿ ರಾಜ್ಯವನ್ನು ಸಜ್ಜುಗೊಳಿಸುವ ಉದ್ದೇಶವನ್ನು ಈ ಕಾರ್ಯನೀತಿ ಹೊಂದಿದೆ ಎಂದು ಅವರು ಹೇಳಿದರು.
ಎಲೆಕ್ಟ್ರಾನಿಕ್ಸ್, ಐಟಿ/ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ತಂತ್ರಜ್ಞಾನ ಮತ್ತು ನಾವೀನ್ಯತಾ ಸಂಸ್ಥೆ (ಕಿಟ್ಸ್), ನ್ಯಾಸ್ ಕಾಂನ ಉದ್ಯಮ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ ರೂಪಿಸಿರುವ ಕಾರ್ಯನೀತಿ ಇದಾಗಿದೆ ಎಂದ ಡಿಸಿಎಂ ಅಶ್ವಥ್ ನಾರಾಯಣ್, ಇದರ ವ್ಯಾಪ್ತಿಯಲ್ಲಿ ಅನೇಕ ವಲಯಗಳನ್ನು ಸೇರಿಸಿಕೊಂಡು ಮುನ್ನಡೆಯಲಾಗುವುದು ಎಂದರು.
ಕ್ಷೇತ್ರಗಳು ಯಾವುವು?:
*ವೈಮಾಂತರಿಕ್ಷ ಮತ್ತು ರಕ್ಷಣೆ
*ವಾಹನ-ವಾಹನ ಬಿಡಿಭಾಗಗಳು-ವಿದ್ಯುತ್ ಚಾಲಿತ ವಾಹನಗಳು
*ಜೈವಿಕ ತಂತ್ರಜ್ಞಾನ, ಔಷಧ ಮತ್ತು ವೈದ್ಯಕೀಯ ಉಪಕರಣಗಳು/ಸಾಧನಗಳು
*ಅರೆವಾಹಕಗಳು, ದೂರಸಂಪರ್ಕ, ಎಲೆಕ್ಟ್ರಾನಿಕ್ ವ್ಯವಸ್ಥೆ ಮತ್ತು ಅಭಿವೃದ್ಧಿ ನಿರ್ವಹಣೆ (ಇ.ಎಸ್.ಡಿ.ಎಂ.)
*ಸಾಫ್ಟ್‌ವೇರ್ ಉತ್ಪನಗಳು
ಇವು ಈ ಕಾರ್ಯನೀತಿಯ ಐದು ಆದ್ಯತಾ ವಲಯಗಳಾಗಿವೆ. ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ ಅನುಷ್ಟಾನದ ನಂತರ ಮೇಲಿನ ಎಲ್ಲ ಕ್ಷೇತ್ರಗಳಲ್ಲಿ ಅಚ್ಚರಿಯ ಫಲಿತಾಂಶಗಳನ್ನು ಹಾಗೂ ಮುನ್ನಡೆಯನ್ನು ಕಾಣಬಹುದು ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.
ಜ್ಞಾನಕಾಶಿಯಾಗಿಸಲು ಸಹಕಾರಿ:
400ಕ್ಕೂ ಹೆಚ್ಚು ಆರ್ ಅಂಡ್ ಡಿ ಕೇಂದ್ರಗಳು/ಜಿಸಿಸಿಗಳು ರಾಜ್ಯದಲ್ಲಿದ್ದು ದೇಶದ ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ಉದ್ಯಮದಲ್ಲಿ ಅತ್ಯಂತ ಹೆಚ್ಚಿನ ಕೊಡುಗೆ ನೀಡುತ್ತಿದೆ. ಈ ಅಗ್ರ ಶ್ರೇಯಾಂಕವನ್ನು ಕಾಯ್ದುಕೊಳ್ಳುವ ಗುರಿ ನಮಗಿದ್ದು, ಬೌದ್ಧಿಕ ಸ್ವತ್ತುಗಳ ಸೃಷ್ಟಿ ಹಾಗೂ ರಾಜ್ಯವನ್ನು ಕೌಶಲಯುಕ್ತ ಜ್ಞಾನಕಾಶಿಯಾಗಿಸಲು ಇದು ಸಹಕಾರಿ ಆಗುತ್ತದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ವಿವರಿಸಿದರು.
.ಅತ್ಯಂತ ಪರಿಣಾಮಕಾರಿ ಒಳನೋಟದಿಂದ ಕೂಡಿದ ನೀತಿ ಇದಾಗಿದೆ. ಉದ್ಯಮ ಪ್ರಚಲಿತ ಸ್ಥಿತಿಗತಿಗಳನ್ನು ಅವಲೋಕನ ಮಾಡಿ, ಅದಕ್ಕೆ ತಕ್ಕಂತೆ ಇದನ್ನು ರೂಪಿಸಲಾಗಿದೆ. ರಾಜ್ಯವು ಬಹುರಾಷ್ಟ್ರೀಯ ಕಂಪನಿಗಳ ಪ್ರಶಸ್ತ ಆದ್ಯತೆಯ ತಾಣವನ್ನಾಗಿಸಲು ಈ ನೀತಿ ಅನುವು ಮಾಡಿಕೊಡಲಿದೆ. ಜಾಗತಿಕ ಮುಂಚೂಣಿ ಇ.ಆರ್.&ಡಿ ಕಂಪನಿಗಳು, ಜಾಗತಿಕ ಸಾಮರ್ಥ್ಯ ಕೇಂದ್ರಗಳು (ಜಿಸಿಸಿ), ಎಂಜಿನಿಯರಿಂಗ್ ಸೇವಾದಾತರು ರಾಜ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಹೂಡಿಕೆ ಮಾಡುವಂತೆ ಮಾಡುವುದು ಹಾಗೂ ಹಾಗೆ ಬರುವ ಘಟಕಗಳಿಗೆ ರಾಜ್ಯದಲ್ಲಿ ಸೂಕ್ತ ವಾತಾವರಣ ನಿರ್ಮಿಸಬೇಕು ಎಂಬುದು ಈ ನೀತಿ ಗುರಿ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.
ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ (ಇ.ಆರ್.&ಡಿ) ನೀತಿ-2021; ಏನು? ಎತ್ತ?
ಈಗ ಅನಾವರಣಗೊಂಡಿರುವ ಈ ನೀತಿಯ ಕಾರ್ಯಸೂಚಿ, ಉದ್ದೇಶಗಳು, ಉಪಯೋಗ, ಇನ್ನಿತರೆ ಅಂಶಗಳ ಬಗ್ಗೆ ಉಪ ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದು ಹೀಗೆ;
ನೀತಿಯ ಉದ್ದೇಶ ….
-ಉದ್ಯಮ ಹಾಗೂ ಶೈಕ್ಷಣಿಕ ವಲಯದ ನಡುವೆ ಸಂಪರ್ಕಗಳನ್ನು ಸೃಷ್ಟಿಸುವುದು.
-ಕೌಶಲಯುಕ್ತ ಎಂಜಿನಿಯರಿಂಗ್ ಮಾನವ ಸಂಪನ್ಮೂಲ ಸೃಷ್ಟಿಸುವುದು.
-ಪರೀಕ್ಷೆ, ಪ್ರಾಯೋಗಿಕ ಮಾದರಿ ಹಾಗೂ ಇತರ ನಾವೀನ್ಯತಾ ಮೂಲಸೌಕರ್ಯಗಳ ಸೃಷ್ಟಿ.
-ಬೆಂಗಳೂರು ವ್ಯಾಪ್ತಿಯಾಚೆ ಎಂಜಿನಿಯರಿಂಗ್ ಆರ್&ಡಿ ಉದ್ಯಮ ಬೆಳೆಸುವುದು
*ನೀತಿಯ ಉಪಯೋಗ
-ದೇಶದ ಎಂಜಿನಿಯರಿಂಗ್ ಮತ್ತು ಅಭಿವೃದ್ಧಿ ವಹಿವಾಟನಲ್ಲಿ ಕರ್ನಾಟಕದ ಶೇ.45ರಷ್ಟು ಕೊಡುಗೆಗೆ ಅನುವು ಮಾಡಿಕೊಡುವುದು.
-50,000 ಕೌಶಲಯುಕ್ತ ಉದ್ಯೋಗಗಳನ್ನು (ಪ್ರತ್ಯಕ್ ಹಾಗೂ ಪರೋಕ್ಷ) ಸೃಷ್ಟಿಸುವುದು.
-ಎಂಜಿನಿಯರಿಂಗ್ ಸಂಶೋಧನೆ ಹಾಗೂ ಅಭಿವೃದ್ಧಿ ಕ್ಷೇತ್ರಕ್ಕೆ ಹೆಚ್ಚು ಹೂಡಿಕೆ ಆಕರ್ಷಿಸುವುದು.
-ಎಂಜಿನಿಯರಿಂಗ್/ಸಂಶೋಧನಾ ಪ್ರತಿಭಾ ಸಂಪನ್ಮೂಲ ಹಾಗೂ ಉದ್ಯಮದ ಅಗತ್ಯಗಳ ಅಂತರ ತುಂಬುವುದು.
*ಪ್ರೋತ್ಸಾಹಕ ಕ್ರಮ:
- ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಾಚೆಗೆ ಸ್ಥಾಪನೆ/ವಿಸ್ತರಣೆ ಮಾಡಿದರೆ ಬಾಡಿಗೆ ಮರುಪಾವತಿ.
- ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಾಚೆಗೆ ಸ್ಥಾಪನೆ/ವಿಸ್ತರಣೆ ಮಾಡಿದರೆ ನೇಮಕಾತಿಗೆ ನೆರವು.
- ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಾಚೆಗೆ ಸ್ಥಾಪನೆ/ವಿಸ್ತರಣೆ ಮಾಡಿದರೆ ಹೂಡಿಕೆಗೆ ಸಬ್ಸಿಡಿ.
- ನಾವೀನ್ಯತಾ ಪ್ರಯೋಗಾಲಯಗಳ ಸ್ಥಾಪನೆಗೆ ಹಣಕಾಸು ನೆರವು.
- ಡಿಜಿಟಲ್ ನಾವೀನ್ಯತಾ ಕಾರ್ಯಯೋಜನೆಗಳಿಗೆ ರೂ.3 ಕೋಟಿಯವರೆಗೆ ನೆರವು.
- ಶೈಕ್ಷಣಿಕ ವಲಯದ ಸಂಶೋಧನೆಗಳನ್ನು ಔದ್ಯಮಿಕ ಆನ್ವಯಿಕತೆಯಾಗಿ ಪರಿವರ್ತಿಸಲು ಅನುದಾನ.
- ಭವಿಷ್ಯದ ಇ.ಆರ್. ಮತ್ತು ಡಿ ಕೋರ್ಸುಗಳನ್ನು ರೂಪಿಸಲು ನೆರವು.
- ಶೈಕ್ಷಣಿಕ ಕೌಶಲಗಳು ಹಾಗೂ ಉದ್ಯಮಗಳ ನಡುವಿನ ಅಂತರ ತುಂಬಲು ಇಂಟರ್ನಶಿಪ್ ಉತ್ತೇಜಿಸಲು ಸ್ಟೈಪೆಂಡ್ ನೀಡುವುದು ಇತ್ಯಾದಿ.
- ಇ.ಆರ್.ಅಂಡ್ ಡಿ ವಲಯದಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಉತ್ತೇಜನ.
- ಪಿಎಚ್.ಡಿ. ಮಾಡುವವರಿಗೆ ಮುಖ್ಯಮಂತ್ರಿಯವರ ಸಂಶೋಧನಾ ಅನುದಾನ.
ರಾಜ್ಯದ ಮಾಜಿ ಮುಖ್ಯಕಾರ್ಶಿ ಹಾಗೂ ಆಡಳಿತ ಸುಧಾರಣಾ ಆಯೋಗ-2ರ ಅಧ್ಯಕ್ಷ ಟಿ.ಎಂ.ವಿಜಯಭಾಸ್ಕರ್, ಐಟಿ ವಿಷನ್ ಗ್ರೂಪ್ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್, ನ್ಯಾಸ್‌ಕಾಂ ಅಧ್ಯಕ್ಷೆ ದೇಬ್‌ಜಾನಿ ಘೋಷ್ ಅವರುಗಳ ನೀತಿಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರಲ್ಲದೆ, ಮುಂದಿನ ದಿನಗಳಲ್ಲಿ ಪ್ರಸಕ್ತ ನೀತಿಯಿಂದ ರಾಜ್ಯಕ್ಕೆ-ದೇಶಕ್ಕೆ ಆಗಲಿರುವ ಪ್ರಯೋಜನಗಳ ಬಗ್ಗೆ ಬೆಳಕು ಚೆಲ್ಲಿದರು,
ಎಲೆಕ್ಟ್ರಾನಿಕ್ಸ್, ಐಟಿ/ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ ಅವರು ನೀತಿಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ರಾಜ್ಯದ ನ್ಯಾಸ್ ಕಾಂ ಮುಖ್ಯಸ್ಥ ವಿಶ್ವನಾಥನ್, ಕ್ವೆಸ್ಟ್ ಗ್ಲೋಬಲ್ ಅಧ್ಯಕ್ಷ ಡಾ.ಅಜಯ್ ಪ್ರಭು, ಎಲೆಕ್ಟ್ರಾನಿಕ್ಸ್, ಐಟಿ/ಬಿಟಿ ಇಲಾಖೆ ನಿರ್ದೇಶಕಿ ಮೀನಾ ನಾಗರಾಜ್ ಮುಂತಾದವರು ಈ ಸಂದರ್ಭದಲ್ಲಿ ಇದ್ದರು.
ENGLISH SUMMARY….
The Ambitious Policy unveiled by DyCM Dr. C.N.Ashwatha Narayana
Country’s first Karnataka ER&D Policy-2021 launched
Bengaluru: The Country’s ever first Engineering Research & Development policy framed by the government of Karnataka ER& D Policy-2021 was launched on Tuesday by Deputy Chief Minister Dr.C.N.Ashwatha Narayana, who also holds the IT/Bt and S&T portfolio.
Narayana in his inaugural said, “the ER&D sector in the country is the fastest growing industry with a CAGR of 12.8%. Meanwhile, the global Engineering Research and Development industry is expected to reach a spend of USD 2 trillion by 2025. Considering this scenario, this policy aims to prepare the state to make use of the future opportunities emanating from this sector.”
Department of Electronics, IT, Bt and S&T, Karnataka Innovation and Technology Society (KITS), and NASSCOM have involved in drafting this policy after wider consultations with all the other participating stakeholders including the representatives of the industry.
The five Priority Sectors of the policy include (1) Aerospace & Defence (2) Auto, Auto Components & EV (3) Biotechnology (Bt), Pharma & Medical Devices (4) Semiconductors, Telecom, ESDM (5) Software Products.
Karnataka is currently the leading contributor to the Indian Engineering R&D industry revenue. The State is home to over 400 leading R&D Centers/ GCCs. This policy aims to retain this position, generation of intellectual properties (IPs), and to make this as skilled knowledge capital, Narayana pointed out.
Karnataka which has been at the forefront of technological innovation for a long time has come out with this visionary policy after studying the industry trends. This intends to make Karnataka a preferred destination of choice for global MNCs, GCC (global capability centers), engineering service providers (ESPs) and to create a suitable ecosystem all across the state, he explained.
Kris Gopalakrishnan, Chairman-Karnataka Vision Group on IT, and Debjani Ghosh, President NASSCOM virtually attended and spoke on the occasion. Dr. E.V. Ramana Reddy, Additional Chief Secretary, Department of Electronics, IT, Bt and S&T, Dr. Ajay Prabhu, President, QuEST Global & Chair for NASSCOM Engineering, Meena Nagaraj, Director, Department of Electronics, IT, Bt and S&T and Managing Director, KITS were among the dignitaries present.
Objectives
• Attract leading Engineering R&D entities to establish and/or expand in Karnataka
• Create strong linkages between Industry and Academia
• Establish and offer access to advanced testing, prototyping, and other innovation infrastructure
• Facilitate Engineering R&D entities to adopt leading practices and gain marketing opportunities
• Taking the Engineering R&D industry beyond Bengaluru to spur the growth of regional economies
• Promote IP Creation, Registration, and Retention in Karnataka
Potential Benefits
• Enable Karnataka to contribute ~45% to India’s Engineering R&D during the policy period;
• Create an additional ~50,000 new jobs (direct & indirect) for skilled manpower in the Engineering R&D sector during the policy period;
• Developing a research-oriented skilled talent pool and foster a knowledge economy;
• Attract Engineering R&D intensive investment into Karnataka; and
• To augment capacity by bridging the Gap between Engineering/ Research Talent and Industry’s Technology Needs.
Incentives offered
• Rental Reimbursement for setting up/ expanding in beyond Bengaluru Urban District.
• Recruitment Assistance for setting up/ expanding in beyond Bengaluru Urban District.
• Investment subsidy for setting up or expanding in beyond Bengaluru Urban District.
• Engineering R&D Fund to Support Technological Innovation.
• R&D Infrastructure Program to create and strengthen the testing and prototyping infrastructure.
• Innovation Labs Program to encourage open innovation
• Digital Innovation for Services Challenges to encourage technology interventions that have a social impact.
• Applied Research in Academia Program to support the industrial application of Academic Research.
• To develop Engineering R&D Future Skills Courses and promote the adaptation of these courses in State Government Engineering Universities/ Affiliated Colleges.
• To promote internships to bridge the gap between academic skills and the needs of the Engineering R&D industry, GoK will reimburse 50% of the internship stipend for interns per entity, for a period of 3 months, up to INR 10,000 per month per intern. The entity to offer internships to 33% women candidates and consider 30% of the total interns into full-time employment.
• CM Research Fellowship program designed to provide a monthly stipend and an annual research grant to students in PhD programs related to Engineering R&D. GoK will provide a monthly stipend of INR 70,000 for the first two years, a monthly stipend of INR 75,000 for the third year and monthly stipend of INR 80,000 for the fourth year and annual research grant of INR 2 lakhs for students enrolled in Karnataka. 25% of women candidates shall be considered for this offering.
What Industry Experts have to say:
This ER &D policy is progressive and well conceptualized.
– Dr. Ajay Prabhu, President, Technology Services,
QuEST Global
This policy enables to further strengthen the research and deep tech ecosystem of the system.
-Sindhu Gangadharan, SVP & MD, SAP Labs India
This nurtures the collaboration between industry, academia, and the government.
-Rohini Srivathsa, National Technology Officer, Microsoft India
Effective implementation of the policy would help to bridge the gap between engineering talent and opportunities
-Dr. Keshab Panda, MD & CEO, L&T Technology Services
This would facilitate transforming the state to become a vibrant knowledge-based economy.
_ Kishor Patil, Co-founder, CEO, and MD, KPIT
Key words: DCM -Ashwath Narayan -Published – Engineering Research & Development Policy -21.