ಬೆಂಗಳೂರು,ಜೂನ್,2,2021(www.justkannada.in): ರಾಜ್ಯದಲ್ಲಿ ವ್ಯಾಪಕವಾಗಿ ಹರಡಿರುವ ಕೊರೋನಾ 2ನೇ ಅಲೆ ತಡೆಗಟ್ಟಲು ಜೂನ್ 7ರ ವರೆಗೆ ಲಾಕ್ ಡೌನ್ ಜಾರಿ ಮಾಡಲಾಗಿದ್ದು ಆ ನಂತರವೂ ಲಾಕ್ ಡೌನ್ ಮುಂದುವರೆಯಲಿದೆಯೇ ಎಂಬ ಪ್ರಶ್ನೆ ರಾಜ್ಯದ ಜನರಲ್ಲಿ ಮೂಡಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಿಸಿಎಂ ಅಶ್ವಥ್ ನಾರಾಯಣ್, ಇನ್ನು ಜೂನ್ 7ರವರೆಗೆ ಕಾಲಾವಕಾಶವಿದೆ. ಹೀಗಾಗಿ ಲಾಕ್ ಡೌನ್ ಮುಂದುವರಿಕೆ ಅಥವಾ ಅನ್ ಲಾಕ್ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಎಲ್ಲರ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.
ಹಾಗೆಯೇ ಹಂತ ಹಂತವಾಗಿ ಅನ್ ಲಾಕ್ ಮಾಡಲಾಗುತ್ತದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ. ಇನ್ನು ಡಾ. ದೇವಿಶೆಟ್ಟಿ ನೇತೃತ್ವದ ತಜ್ಞರ ಸಮಿತಿ ಜತೆ ಸಿಎಂ ಬಿಎಸ್ ಯಡಿಯೂರಪ್ಪ ಸಭೆ ನಡೆಸಿ ಚರ್ಚಿಸಿದ್ದು ಇದೀಗ ಸಚಿವರು ಮತ್ತು ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸುತ್ತಿದ್ದಾರೆ.
Key words: DCM- Ashwath Narayan- reaction- continuation – lockdown.