ದೆಹಲಿ,ಫೆಬ್ರವರಿ,06,2021(www.justkannada.in) : ಪ್ರಸಿದ್ಧ ಕಲಾವಿದ ರಾಮ್ ಸುತಾರ್ ನೇತೃತ್ವದ ತಂಡ ನಿರ್ಮಿಸುತ್ತಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಥರ್ಮಾಕೋಲ್ ಪ್ರತಿಮೆ ಪ್ರಗತಿಯನ್ನು ಡಿಸಿಎಂ ಡಾ.ಸಿ.ಎನ್. ಅಶ್ವಥ್ ನಾರಾಯಣ, ಆದಿಚುಂಚನಗಿರಿ ಮಠದ ಪೀಠಾದ್ಯಕ್ಷ ನಿರ್ಮಾಲಾನಂದನಾಥ ಸ್ವಾಮೀಜಿ ವೀಕ್ಷಿಸಿದರು.
ಶನಿವಾರ ದೆಹಲಿ ಸಮೀಪದ ನೋಯ್ಡಾಕ್ಕೆ ಭೇಟಿ ನೀಡಿದ ಡಿಸಿಎಂ ಡಾ.ಸಿ.ಎನ್. ಅಶ್ವಥ್ ನಾರಾಯಣ, ಆದಿಚುಂಚನಗಿರಿ ಮಠದ ಪೀಠಾದ್ಯಕ್ಷ ನಿರ್ಮಾಲಾನಂದನಾಥ ಸ್ವಾಮೀಜಿ ಕೆಂಪೇಗೌಡರ ಥರ್ಮಾಕೋಲ್ ಪ್ರತಿಮೆ ಪ್ರಗತಿಯನ್ನು ವೀಕ್ಷಿಸಿದರು.
ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನನಿಲ್ದಾಣದ ಮುಂದೆ ಪ್ರತಿಷ್ಠಾಪನೆ
ಮೊದಲ ಹಂತದಲ್ಲಿ ಪ್ರತಿಮೆಯನ್ನು ಥರ್ಮಾಕೋಲ್‌ನಲ್ಲಿ ಮಾಡಿ ಏನಾದರೂ ಬದಲಾವಣೆಗಳು ಇದ್ದಲ್ಲಿ ಆ ಸಂದರ್ಭದಲ್ಲೇ ಅದನ್ನು ಸರಿಪಡಿಸಲಾಗುತ್ತದೆ. ಅದರ ನಂತರ ಅಂತಿಮವಾಗಿ ಕಂಚಿನ ಪ್ರತಿಮೆ ಮಾಡಲಾಗುತ್ತದೆ. ಈ ಪ್ರತಿಮೆಯನ್ನು ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನನಿಲ್ದಾಣ ದ ಮುಂದೆ ಪ್ರತಿಷ್ಠಿಸಲಾಗುತ್ತದೆ ಎಂದು ತಿಳಿಸಿದರು.
key words : DCM Ashwaththanarayana-seen-progress-Nadaprabhu Kempegowder’s-Thermacol-Statue