ಬೆಂಗಳೂರು,ಮಾರ್ಚ್,11,2025 (www.justkannada.in): ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಚಿವರ ಕೈವಾಡವಿದೆ ಎಂದು ಆರೋಪಿಸಿರುವ ಬಿಜೆಪಿಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಇದರಲ್ಲಿ ಯಾವ ಮಂತ್ರಿನೂ ಇನ್ ವಾಲ್ವ್ ಆಗಿಲ್ಲ. ನಮಗೂ ಅದಕ್ಕೂ ಯಾವುದಕ್ಕೂ ಸಂಬಂದವೇ ಇಲ್ಲ ಎಂದಿದ್ದಾರೆ.
ಕಾನೂನು ಪ್ರಕಾರ ತನಿಖಾಧಿಕಾರಿಗಳಿಂದ ತನಿಖೆಯಾಗುತ್ತಿದೆ ನಮಗೂ ಅದಕ್ಕೂ ಸಂಬಂಧವಿಲ್ಲ ಕೇಂದ್ರ ಸರ್ಕಾರ ತನಿಖೆ ಮಾಡುತ್ತಿದೆ. ತನಿಖೆ ಮಾಡಲಿ, ಸತ್ಯಾಂಶ ಹೊರಬರಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
Key words: Ranya Rao, gold smuggling case, DCM, DK Shivakumar