ತೆರಿಗೆ ಪಾಲು ಹಂಚಿಕೆಯಲ್ಲಿ ಕೇಂದ್ರದಿಂದ ಅನ್ಯಾಯ- ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ

ಬೆಂಗಳೂರು,ಜನವರಿ,11,2025 (www.justkannada.in):  ತೆರಿಗೆ ಪಾಲು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ. ನಮ್ಮ ಹಕ್ಕಿಗೆ ನಮ್ಮ ತೆರಿಗೆಗೆ ಹೋರಾಟ ಮಾಡಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ನಿನ್ನೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ತೆರಿಗೆ ಪಾಲು ಹಂಚಿಕೆ ಮಾಡಿತ್ತು. ಕರ್ನಾಟಕಕ್ಕೆ 6310.40 ಕೋಟಿ ಬಿಡುಗಡೆ ಮಾಡಿತ್ತು. ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಉತ್ತರ ಪ್ರದೇಶ ದೊಡ್ಡ ರಾಜ್ಯ ಇದು ಬೇರೆ ವಿಚಾರ.  ಕರ್ನಾಟಕಕ್ಕೆ ಕೇಂದ್ರದಿಂದ ಅನ್ಯಾಯವಾಗಿದೆ. ಸರಿಯಾದ ಅನುಪಾತದಲ್ಲಿ ತೆರಿಗೆ ಪಾಲು ಹಂಚಿಕೆಯಾಗಿಲ್ಲ. ನಮಗೆ ಅನ್ಯಾಯ ಆಗಿದೆ  ನಮ್ಮ ಹಕ್ಕಿಗೆ ನಮ್ಮ ತೆರಿಗೆಗೆ ಹೋರಾಟ ಮಾಡಬೇಕು. ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಮುಖ್ಯಮಂತ್ರಿಗಳು ದೊಡ್ಡ ಅಧ್ಯಯನ ಮಾಡುತ್ತಿದ್ದಾರೆ ಎಂದರು.

ಬಿಜೆಪಿಯವರು ಇಷ್ಟೊಂದು ಸಂಸದರಿದ್ದರೂ ಮೌನ ವಹಿಸಿದ್ದಾರೆ ಎಂದು ಡಿಕೆ ಶಿವಕುಮಾರ್ ಕಿಡಿ ಕಾರಿದರು.

Key words: DCM, DK Shivakumar, Centre, Grant,  Karanataka