ಬೆಂಗಳೂರು,ಮಾರ್ಚ್,25,2025 (www.justkannada.in): ಡಿಕೆ ಶಿವಕುಮಾರ್ ಸಂವಿಧಾನ ಬದಲಾವಣೆ ಮಾತುಗಳನ್ನಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿ ಪ್ರತಿಭಟನೆ ನಡೆಸಿದ್ದು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಆದರೆ ಈ ಆರೋಪವನ್ನ ತಳ್ಳಿಹಾಕಿರುವ ಡಿಸಿಎಂ ಡಿಕೆ ಶಿವಕುಮಾರ್, ನಾನು ಆ ರೀತಿ ಹೇಳಿದ್ದರೇ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಎಸೆದಿದ್ದಾರೆ.
ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್ ಸಂವಿಧಾನ ಬದಲಾವಣೆ ಬಗ್ಗೆ ನಾನು ಮಾತನಾಡಿಲ್ಲ. ನನ್ನ ನಿಲುವಿನ ಬಗ್ಗೆ ಅವರಿಗೆ ಸಹಿಸಿಕೊಳ್ಳಲಾಗುತ್ತಿಲ್ಲ ನಾನು ಸಂವಿಧಾನ ಬದಲಾವಣೆ ಮಾಡುತ್ತೇನೆಂದು ಹೇಳಿಲ್ಲ. ಸಂವಿಧಾನ ರಕ್ಷಣೆ ಮಾಡುತ್ತಿರುವುದೇ ಕಾಂಗ್ರೆಸ್. ನನ್ನ ಹೇಳಿಕೆ ಒಮ್ಮೆ ನೋಡಿ . ನಾನು ಆ ರೀತಿ ಹೇಳಿದ್ದರೇ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದರು.
Key words: Constitutional Change, retired, politics – DCM, DK Shivakumar