ಬೆಂಗಳೂರು,ಏಪ್ರಿಲ್,10,2025 (www.justkannada.in): ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆಗೆ ಪ್ರತಿಯಾಗಿ ಇದೀಗ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಜನಾಕ್ರೋಶ ಯಾತ್ರೆಗೆ ಮುಂದಾಗಿದೆ.
ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸರ್ಕಾರದ ವಿರುದ್ದ ಏಪ್ರಿಲ್ 17 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಜನಾಕ್ರೋಶ ಯಾತ್ರೆ ಮಾಡುತ್ತೇವೆ. ಬಿಜೆಪಿಯಲ್ಲಿ ಎಲ್ಲರೂ ವೀರರು ಶೂರುರು ಆಗೋಕೆ ಹೊರಟಿದ್ದಾರೆ. ಕೇಂದ್ರದ ವಿರುದ್ದ ಬಿಜೆಪಿಯವರು ಜನಾಕ್ರೋಶ ಯಾತ್ರೆ ನಡೆಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಬಿಜೆಪಿ ನಮ್ಮ ವಿರುದ್ದ ಯಾತ್ರೆ ಮಾಡುವಂತದ್ದು ಏನು ಇಲ್ಲ ಕೇಂದ್ರದ ನೀತಿಯಿಂದ ಎಲ್ಲ ವರ್ಗದ ಜನರಿಗೆ ಸಮಸ್ಯೆಯಾಗಿದೆ. ಬಿಜೆಪಿಯವರು ಕೇಂದ್ರ ಸರ್ಕಾರದ ವಿರುದ್ದ ಜನಾಕ್ರೋಶ ಯಾತ್ರೆ ಅಂತ ಬೋರ್ಡ್ ಹಾಕಿಕೊಳ್ಳಲಿ ಎಂದು ಡಿಕೆ ಶಿವಕುಮಾರ್ ಲೇವಡಿ ಮಾಡಿದರು.
ಬೆಂಗಳೂರಿನಲ್ಲಿ 2ನೇ ಏರ್ ಪೋರ್ಟ್ ನಿರ್ಮಾಣ ವಿಚಾರದಲ್ಲಿ ನಾನು ತಲೆ ಹಾಕಲ್ಲ. ಏರ್ ಪೋರ್ಟ್ ವಿಚಾರದಲ್ಲಿ ನನ್ನ ಜೊತೆ ಯಾರೂ ಚರ್ಚಿಸಿಲ್ಲ. ಬಿಡದಿಯಲ್ಲಿ ಏರ್ ಪೋರ್ಟ್ ಮಾಡಿ ಅಂತಾ ಹೇಳಿಲ್ಲ. ನನಗೆ ಚಾಮರಾಜನಗರವೂ ಒಂದೇ. ಬೀದರ್ ಸಹ ಒಂದೇ. ಎಲ್ಲೇ ಏರ್ ಪೋರ್ಟ್ ಮಾಡಿದರೂ ಸಂತಸ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
Key words: April 17, Janakrosh yatra, State Government, DCM, DK Shivakumar