ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ  ನಿಜಕ್ಕೂ ಕೆಟ್ಟ ಬೆಳವಣಿಗೆ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಏಪ್ರಿಲ್,23,2025 (www.justkannada.in):  ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ  ನಿಜಕ್ಕೂ ಕೆಟ್ಟ ಬೆಳವಣಿಗೆ. ಕಾಂಗ್ರೆಸ್ ಪಕ್ಷ ಇದನ್ನು ಖಂಡಿಸುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಕುರಿತು ಮಾತನಾಡಿದ ಡಿಕೆ ಶಿವಕುಮಾರ್,  ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಜಾಗೃತವಾಗಿ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಈ ಭಯೋತ್ಪಾದಕರನ್ನು ಸದೆಬಡಿಯಬೇಕು. ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಬೇಕು. ಇಂತಹ ಸಂಘಟನೆಗಳು ಯಾವುದೇ ದೇಶಕ್ಕೆ ಸಂಬಂಧಿಸಿದರೂ ಇವುಗಳನ್ನು ಬುಡಸಮೇತ ಕಿತ್ತೊಗೆಯಬೇಕು.  ಈ ಘಟನೆ ವಿದೇಶಾಂಗ ನೀತಿಯಿಂದ ಪ್ರವಾಸಿಗರು ಹಾಗೂ ದೇಶದ ಜನರ ಮೇಲೆ ಪ್ರಭಾವ ಬೀರುವುದರಿಂದ ಕೇಂದ್ರ ಸರ್ಕಾರ ಈ ವಿಚಾರವಾಗಿ ಸರ್ವಪಕ್ಷ ಸಭೆ ಕರೆಯಬೇಕು. ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದು ಈ ವಿಚಾರವನ್ನು ಚರ್ಚಿಸಬೇಕು ಎಂದು ಡಿಕೆ ಶಿವಕುಮಾರ್ ಹೇಳಿದರು.

Key words: Terrorist attacks religion, DCM DK Shivakumar