ಮೈಸೂರು ,ಏಪ್ರಿಲ್,25,2025 (www.justkannada.in): ಈ ಬಾರಿ ದಸರಾದಲ್ಲಿ ಕೆಲ ಬದಲಾವಣೆ ತರಲು ಚಿಂತನೆ ಮಾಡಿದ್ದೇವೆ. ದಸರಾದಲ್ಲಿ ಕಂಬಳ ಸೇರಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕೆಲ ಹೊಸ ಆಚರಣೆಗಳನ್ನು ಸೇರಿಸಬೇಕು. ಹಳೆಯ ಪದ್ಧತಿ ಜೊತೆಗೆ ಹೊಸ ಆಚರಣೆಗಳು ದಸರಾ ಮೆರಗನ್ನು ಹೆಚ್ಚು ಮಾಡುತ್ತವೆ. ಈ ಬಗ್ಗೆ ಅಧಿಕಾರಿಗಳ ಚರ್ಚೆ ಮಾಡಿದ್ದೇವೆ. ಈ ಬಾರಿ ದಸರಾದಲ್ಲಿ ಅನೇಕ ಬದಲಾವಣೆ ಆಗುತ್ತದೆ ಎಂದು ತಿಳಿಸಿದರು.
ಟೌನ್ ಶಿಪ್ ಪಿತಾಮಹ ದೇವೇಗೌಡರು ಹಾಗೂ ಹೆಚ್.ಡಿ ಕುಮಾರಸ್ವಾಮಿ
ಬಿಡದಿ ಟೌನ್ ಶಿಪ್ ಗೆ ರೈತರ ಭೂಮಿ ಕೈ ಬಿಡುವಂತೆ ಸಿಎಂಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಪತ್ರ ಬರೆದ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ಕುಮಾರಸ್ವಾಮಿ ಕಾಲದಲ್ಲೇ 7 ಟೌನ್ ಶಿಪ್ ಮಾಡಬೇಕು ಅಂತ ತೀರ್ಮಾನ ಆಗಿದ್ದು. ಅದಕ್ಕಾಗಿ 300 ಕೋಟಿ ಹಣ ಕೊಟ್ಟಿದ್ದರು. ಟೌನ್ ಶಿಪ್ ಪ್ಲಾನ್ ಅವರ ಕಾಲದಲ್ಲೇ ಆಗಿದ್ದು. ನಾನು ಡಿನೋಟಿಫಿಕೇಷನ್ ಮಾಡಲು ಹೋಗಲ್ಲ. ಈ ಹಿಂದೆ ನನ್ನ ಮೇಲೆ ಏನೆಲ್ಲಾ ಹೇಳಿದ್ರು ಅದೆಲ್ಲ ಇತಿಹಾಸ. ಟೌನ್ ಶಿಪ್ ಪಿತಾಮಹ ದೇವೇಗೌಡ ಹಾಗೂ ಕುಮಾರಸ್ವಾಮಿ. ಯಾರು ಏನೇ ಹೇಳಿದರೂ ಗ್ರೇಟರ್ ಬೆಂಗಳೂರು ಮಾಡಿಯೇ ಮಾಡುತ್ತೇವೆ. ಬೆಂಗಳೂರಿಗಿಂತ ಚೆನ್ನಾಗಿ 10 ಸಾವಿರ ಎಕರೆಯಲ್ಲಿ ಉತ್ತಮ ಸಿಟಿ ಮಾಡುತ್ತೇವೆ. ಇದು ಮಾಡೆಲ್ ಸಿಟಿ ಆಗತ್ತೆ ರೈತರು ಜಮೀನಿನ ಬದಲಾಗಿ ದುಡ್ಡು ತೆಗೆದುಕೊಳ್ಳಬಹುದು. ಇಲ್ಲದಿದ್ದರೆ ಅಭಿವೃದ್ದಿ ಪಡಿಸಿದ ಲ್ಯಾಂಡ್ ತೆಗೆದುಕೊಳ್ಳಬಹುದು. ಎರಡು ಬಾರಿ ಕುಮಾರಸ್ವಾಮಿ ಸಿಎಂ ಆದರೂ ಯಾಕೆ ರೈತರ ಭೂಮಿ ಸ್ವಾಧೀನದಿಂದ ಕೈ ಬಿಡಲಿಲ್ಲ. ಈ ಬಗ್ಗೆ ದೇವೇಗೌಡರೇ ಹೇಳಲಿ. ಇದರಲ್ಲಿ ರಾಜಕೀಯ ಬೇಡ ಇದೆಲ್ಲ ನಿಮ್ಮ ಮಗನೆ ಮಾಡಿದ್ದು. ನಿಮ್ಮ ಕಾಲದಲ್ಲೇ ಆಗಿದ್ದು ಎಂದು ಹೆಚ್ ಡಿ ದೇವೇಗೌಡರಿಗೆ ಟಾಂಗ್ ಕೊಟ್ಟರು.
ಕಾವೇರಿ ನಮ್ಮ ಜೀವನದಿ. ತಾಯಿಯ ಆರತಿ ಮಾಡಬೇಕು. ಹೀಗಾಗಿ ಕಾವೇರಿ ಆರತಿ ಮಾಡಲು ಮುಂದಾಗಿದ್ದೇವೆ. ವ್ಯವಸಾಯ ಕುಡಿಯಲು ನೀರು ಎಲ್ಲವನ್ನೂ ತಾಯಿ ಕೊಡುತ್ತಿದ್ದಾಳೆ. ರಾಜ್ಯಕ್ಕೆ ಎಲ್ಲರಿಗೂ ಒಳಿತಾಗಲಿ ಎಂದು ಆರತಿ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ರಾಮನಗರ ಹೆಸರು ಬದಲಾವಣೆ ಹೇಗೆ ಮಾಡಬೇಕು ಅಂತಾ ನನಗೆ ಗೊತ್ತು
ರಾಮನಗರ ಹೆಸರು ಬದಲಾವಣೆ ವಿಚಾರ ಕುರಿತು ಮಾತನಾಡಿದ ಡಿಕೆ ಶಿವಕುಮಾರ್, ಅದನ್ನು ಹೇಗೆ ಮಾಡಬೇಕು ಅಂತಾ ನನಗೆ ಗೊತ್ತು. ಅದನ್ನು ಮಾಡೇ ಮಾಡುತ್ತೇನೆ ಎಂದು ಸವಾಲೆಸೆದರು. ನಾವೇನು ಹೊರಗಿನಿಂದ ಬಂದವರಲ್ಲ. ನಮ್ಮ ಭೂಮಿ ನಮ್ಮ ನೆಲದ ಬಗ್ಗೆ ನಮಗೆ ಗೊತ್ತು. ಯಾರು ಅಪ್ಪ ಅಮ್ಮನ ಹೆಸರು ಬದಲಾಯಿಸಲ್ಲ. ಅಫಿಡೆವಿಟ್ ಮಾಡಿಸಿಕೊಳ್ಳಬಹುದು ಅಷ್ಟೇ. ಡಿ.ಕೆ.ಶಿವಕುಮಾರ್ ಬಗ್ಗೆ ಭಯನಾ ಅಸೂಯೆನಾ ಪ್ರಶ್ನೆ..? ಏನು ಅಂತ ಗೊತ್ತಿಲ್ಲ ಆದರೆ ನನ್ನ ಮೇಲೆ ಅತಿಯಾದ ಪ್ರೀತಿ ಎಂದು ಟಾಂಗ್ ಕೊಟ್ಟರು.
Key words: Some changes, mysore dasara, adding, Kambala, DCM, DK Shivakumar