ಬೆಂಗಳೂರು,ನವೆಂಬರ್,10,2023(www.justkannada.in): ಬಿಜೆಪಿ ಹಾಗೂ ಜೆಡಿಎಸ್ ಬರ ಅಧ್ಯಯನ ನಡೆಸುತ್ತಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್ , ಬಿಜೆಪಿ ಹಾಗೂ ಜೆಡಿಎಸ್ ನವರಿಗೆ ಜನರ ಮೇಲೆ ಬಹಳ ಅನುಕಂಪ ಬಂದು ಬರ ಅಧ್ಯಯಕ್ಕೆ ಹೊರಟಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಈಗಾಗಲೇ ರಾಜ್ಯ ಸರ್ಕಾರ ಬರ ಅಧ್ಯಯನ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಕೊಟ್ಟಿದೆ. ಕೇಂದ್ರ ವರದಿಯನ್ನು ಸ್ವೀಕರಿಸಿ ಅಧಿಕಾರಿಗಳನ್ನು ಕಳುಹಿಸಿಕೊಟ್ಟಿದೆ. ಆದರೆ ಈಗ ಬಿಜೆಪಿ ಜೆಡಿಎಸ್ ನಾಯಕರು ಬರ ಅಧ್ಯಯನಕ್ಕೆ ಮುಂದಾಗಿದ್ದಾರೆ. ಮೊಲು ಬಿಜೆಪಿ, ಜೆಡಿಎಸ್ ಶಾಸಕರು ಕೇಂದ್ರದಿಂದ ಅನುದಾನ ಕೊಡಿಸುವ ಕೆಲಸ ಮಾಡಲಿ. ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಪರಿಹಾರ ಕೊಡಿಸುವ ಕೆಲಸ ಮಾಡಲಿ. ಅದು ಬಿಟ್ಟು ಪ್ರಚಾರಕ್ಕಾಗಿ ಎರಡು ಗಿಡಗಳನ್ನು ನೋಡುವುದಲ್ಲ ಎಂದರು.
ಕೇಂದ್ರ ಸರ್ಕಾರದ ಬಳಿ ನಾವೇನು ಭಿಕ್ಷೆ ಕೇಳುತ್ತಿಲ್ಲ. ಕೇಂದ್ರದಿಂದ ಬರಬೇಕಿರುವ ಹಣ ಕೊಡಿಸಲಿ. ನಮ್ಮ ಪಾಲಿನ ಹಣ ಕೇಳುತ್ತಿದ್ದೇವೆ. ಕರ್ನಾಟಕಕ್ಕೆ ಕೇಂದ್ರ ಕೊಡಬೇಕಾದ ಅನುದಾನ ಕೊಡಲಿ ಅಷ್ಟೇ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.
Key words: DCM-DK Shivakumar – BJP -JDS -drought -study.