ಬೆಂಗಳೂರು,ಅ,19,2019(www.justkannada.in): ಮಹದಾಯಿ ಕಳಸಾ ಬಂಡೂರಿ ನಾಲಾ ಯೋಜನೆಗೆ ಅಧಿಸೂಚನೆ ಹೊರಡಿಸುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಡಿಸಿಎಂ ಗೋವಿಂದ ಕಾರಜೋಳ ಭೇಟಿ ನೀಡಿ ಮನವೊಲಿಕೆಗೆ ಮುಂದಾದರು.
ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ಆಗ್ರಹಿಸಿ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಮಹದಾಯಿ ಹೋರಾಟಗಾರರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಡಿಸಿಎಂ ಗೋವಿಂದ ಕಾರಜೋಳ ರೈತರ ಜತೆ ಮಾತುಕತೆ ನಡೆಸಿ ಮನವೊಲಿಕೆಗೆ ಮುಂದಾದರು.
ಈ ವೇಳೆ ಮನವಿ ಪತ್ರವನ್ನ ನಾವೇ ರಾಜ್ಯಪಾಲರಿಗೆ ತಲುಪಿಸುತ್ತೇವೆ ನಮಗೆ ನೀಡಿ ಎಂದು ಡಿಸಿಎಂ ಗೋವಿಂದ ಕಾರಜೋಳ ರೈತರಲ್ಲಿ ಮನವಿ ಮಾಡಿದರು. ಕಾರಜೋಳ ಅವರ ಮನವಿ ನಿರಾಕರಿಸಿದ ಪ್ರತಿಭಟನಾಕಾರರು ನಾವೇ ನೇರವಾಗಿ ರಾಜ್ಯಪಾಲರಿಗೆ ಪತ್ರವನ್ನ ತಲುಪಿಸುತ್ತೇವೆ. ರಾಜ್ಯಪಾಲರ ಭೇಟಿಗೆ ಅವಕಾಶ ಕೊಡಿಸಿ ಎಂದು ಮನವಿ ಮಾಡಿದರು. ಇನ್ನು ರಾಜಧಾನಿಯಲ್ಲಿ ಸುರಿಯುತ್ತಿರುವ ಮಳೆಯನ್ನೂ ಲೆಕ್ಕಿಸದೇ ಮಹದಾಯಿಗಾಗಿ ರೈತರು ಧರಣಿಯನ್ನು ಮುಂದುವರಿಸಿದ್ದಾರೆ.
Key words: DCM -Govinda Karajola- visits – protest – mahadayi fighters.