ಬೆಂಗಳೂರು,ನವೆಂಬರ್,17,2020(www.justkannada.in): ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವನ್ನ ಸ್ಥಾಪಿಸಿ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ ಹಿನ್ನೆಲೆ ಈ ಬಗ್ಗೆ ಡಿಸಿಎಂ ಲಕ್ಷ್ಮಣ್ ಸವದಿ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಲಕ್ಷ್ಮಣ್ ಸವದಿ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕೆಂಬ ನಮ್ಮ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿ ಈ ಬಗ್ಗೆ ಸೂಕ್ತ ಐತಿಹಾಸಿಕ ನಿರ್ಧಾರ ಕೈಗೊಂಡಿರುವ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರನ್ನು ನಾನು ಹೃತ್ಪೂರ್ವಕವಾಗಿ ಅಭಿನಂದಿಸುವುದಾಗಿ ತಿಳಿಸಿದ್ದಾರೆ.
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವ ಮೂಲಕ ಈ ಸಮುದಾಯದಲ್ಲಿನ ಬಡವರು ಮತ್ತು ಹಿಂದುಳಿದವರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗೆ ಮತ್ತಷ್ಟು ಪ್ರೋತ್ಸಾಹ ನೀಡಿದ ಶ್ರೇಯಸ್ಸು ಬಿ.ಎಸ್. ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ. ಈ ಬಗ್ಗೆ ದಿಟ್ಟ ನಿರ್ಧಾರ ಕೈಗೊಂಡ ಅವರಿಗೆ ನಮ್ಮೆಲ್ಲರ ಕೃತಜ್ಞತೆಗಳು ಎಂದು ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ.
ನಿನ್ನೆಯಷ್ಟೇ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ನಿಯೋಗವು, ವೀರಶೈವ ಲಿಂಗಾಯತರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕೆಂದು ಮನವಿ ಮಾಡಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು.
Key words: DCM Laxman Savdi- pleased –express- happiness-Veerashaiva Lingayat Development Corporation.