ಬೆಂಗಳೂರು,ಫೆಬ್ರವರಿ,28,2024(www.justkannada.in): ಅಂಗಡಿ ಮಳಿಗೆಗಳಲ್ಲಿ ಕನ್ನಡ ನಾಮಫಲಕ ಅಳವಡಿಕೆಗೆ ನಾಳೆ ಒಂದು ದಿನ ಸಮಯಾವಕಾಶ ನೀಡಲಾಗಿದ್ದು ನಾಳೆಯೂ ಕಡ್ಡಾಯ ಕನ್ನಡ ನಾಮಫಲಕ ಹಾಕದಿದ್ದರೇ ಕಠಿಣ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ.
ನಾಳೆ ಸಂಜೆವರೆಗೆ ನಾಮಫಲಕ ಬದಲಾಯಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ತುಷಾರ್ ಗಿರಿನಾಥ್ ಎಚ್ಚರಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಕನ್ನಡ ನಾಮಫಲಕ ಹಾಕದಿದ್ದರೆ ಅಂಗಡಿಗಳನ್ನು ಬಂದ್ ಮಾಡುತ್ತೇವೆ. ಈಗಾಗಲೇ ಶೇಕಡಾ 90ರಷ್ಟು ಕನ್ನಡ ನಾಮಫಲಕ ಹಾಕಲಾಗಿದೆ. ಇನ್ನು ಉಳಿದಿರುವುದು 3 ಸಾವಿರ ನಾಮಫಲಕ ಮಾತ್ರ. ಅಂತಾರಾಷ್ಟ್ರೀಯ ಕಂಪನಿಗಳು, SBI, ಕೆನರಾ ಬ್ಯಾಂಕ್ ಮನವಿ ನೀಡಿವೆ. ಕನ್ನಡ ನಾಮಫಲಕ ಅಳವಡಿಕೆಗೆ ಮತ್ತಷ್ಟು ಗಡುವು ಕೇಳಿದ್ದಾರೆ. ಈ ಬಗ್ಗೆ ನಾಳೆ ಸಂಜೆ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.
Key words: Deadline- tomorrow – adoption – Kannada nameplate- Warning -strict action