ಗದಗ,ಮಾರ್ಚ್,8,2022(www.justkannada.in): ಸಾಗುವಳಿ ಭೂಮಿಯಲ್ಲಿ ಟ್ರೆಂಚ್ ವಿರೋಧಿಸಿ ಹಾಗೂ ಅರಣ್ಯ ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೇಲೂರಿನಲ್ಲಿ ರೈತ ಮಹಿಳೆಯರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದೀಗ ಓರ್ವ ರೈತ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ವಿಷ ಸೇವಿಸಿದ್ದ ರೈತ ಮಹಿಳೆ ನಿರ್ಮಲಾ ಪಾಟೀಲ್(34) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮತ್ತೋರ್ವ ರೈತ ಮಹಿಳೆ ಸರೋಜಾ ಸ್ಥಿತಿ ಗಂಭೀರವಾಗಿದ್ದು, ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ರೈತ ಮಹಿಳೆ ಸರೋಜಾಗೆ ಚಿಕಿತ್ಸೆ ಮುಂದುವರೆಸಲಾಗಿದೆ.
ರೈತ ಮಹಿಳೆ ಸಾವಿಗೆ ಅರಣ್ಯ ಇಲಾಖೆ ಅಧಿಕಾರಿಗಳೇ ಕಾರಣ ಎಂದು ಆರೋಪ ಕೇಳಿಬರುತ್ತಿದೆ. ವಿಷ ಸೇವಿಸಿ ಒದ್ದಾಡುತ್ತಿದ್ದಾಗ ನಾಟಕ ಮಾಡ್ತಾಯಿದ್ದಾರೆ ಎಂದು ನಿರ್ಲಕ್ಷ್ಯ ಮಾಡಿದ್ದಾರೆ. 108 ಆಂಬ್ಯುಲೆನ್ಸ್ ಗೂ ಅರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿ ಮಾಡಿದ್ದಾರೆ ಎಂದು ರೈತರು ಕುಟುಂಬಸ್ಥರು ಆರೋಪಿಸಿದ್ದಾರೆ.
ಶವ ಇಟ್ಟು ಗ್ರಾಮಸ್ಥರು, ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
Key words: Death -farmer -woman – suicide