ಬಾಗಲಕೋಟೆ,ಫೆಬ್ರವರಿ,5,2022(www.justkannada.in): ಪದ್ಮಶ್ರೀ ಪುರಸ್ಕೃತ ಆಧುನಿಕ ಸೂಫಿಸಂತ ಕನ್ನಡದ ಕಬೀರ ಇಬ್ರಾಹಿಂ ಸುತಾರ ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬಾಗಲಕೋಟೆ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಪದ್ಮಶ್ರೀ ಪುರಸ್ಕೃತ ಆಧುನಿಕ ಸೂಫಿಸಂತ ಇಬ್ರಾಹಿಂ ಸುತಾರ (76) ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಇಬ್ರಾಹಿಂ ಸುತಾರ್ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಮೂರ್ತಿಯಾಗಿದ್ದರು. ಪ್ರವಚನಕ್ಕೆ ಹೆಸರಾಗಿದ್ದರು. ಅಲ್ಲದೇ ಬಣವಣ್ಣನವರ ಅನುಯಾಯಿಗಳಾಗಿದ್ದು, ಬಸವಣ್ಣನವರ ವಚನಗಳನ್ನು ಹೇಳುತ್ತಿದ್ದರು.
ಇಬ್ರಾಹಿಂ ಸುತಾರ ಅವರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ
ಇಬ್ರಾಹಿಂ ಸುತಾರ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಸರ್ವಧರ್ಮ ಸಮನ್ವಯದ ಪ್ರವಚನಕಾರರು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಂ ಸುತಾರ ನಿಧನರಾಗಿದ್ದಾರೆ. ಅವರು ಇಂದು ನಿಧನರಾದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಸಮಾಜದಲ್ಲಿ ಸಾಮರಸ್ಯದ ಬೀಜ ಬಿತ್ತಲು ಶ್ರಮಿಸಿದ ಸಂತರು. ಅವರ ದಿವ್ಯಾತ್ಮಕ್ಕೆ ದೇವರು ಶಾಂತಿ ನೀಡಲಿ. ನೋವು ಭರಿಸುವ ಶಕ್ತಿ ಕುಟುಂಬದವರಿಗೆ ದೇವರು ಕರುಣಿಸಲಿ ಎಂದು ಸೂಫಿಸಂತ ಇಬ್ರಾಹಿಂ ಸುತಾರ್ ನಿಧನಕ್ಕೆ ಸಿಎಂ ಸಂತಾಪ ವ್ಯಕ್ತಪಡಿಸಿದ್ದಾರೆ.
Key words: Death -Ibrahim Sutara – Kannada Kabir