ತುಮಕೂರು,ನವೆಂಬರ್,4,2022(www.justkannada.in): ತುಮಕೂರು ಜಿಲ್ಲಾಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ತಾಯಿ ಹಾಗೂ ಅವಳಿ ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದಡಿ ಆಸ್ಪತ್ರೆಯ ವೈದ್ಯೆ ಸೇರಿ ನಾಲ್ವರನ್ನ ಅಮಾನತು ಮಾಡಲಾಗಿದೆ.
ಅಂದು ಕರ್ತವ್ಯದಲ್ಲಿದ್ದ ವೈದ್ಯೆ ಉಷಾ ಹಾಗೂ ಮೂವರು ನರ್ಸ್ ಗಳನ್ನ ಅಮಾನತು ಮಾಡಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆದೇಶಿಸಿದ್ದಾರೆ ಎನ್ನಲಾಗಿದೆ. ತಾಯಿ ಕಾರ್ಡ್ ಇಲ್ಲ ಎಂಬ ಕಾರಣದಿಂದಾಗಿ ಕಸ್ತೂರಿ ಎಂಬ ಗರ್ಭಿಣಿಗೆ ಚಿಕಿತ್ಸೆ ನೀಡದೇ ತುಮಕೂರು ಜಿಲ್ಲಾಸ್ಪತ್ರೆಯಿಂದ ವಾಪಸ್ ಕಳುಹಿಸಲಾಗಿತ್ತು.
ವೈದ್ಯೆಯ ಬಳಿ ಅಂಗಲಾಚಿ ಕೇಳಿದ್ರೂ ಚಿಕಿತ್ಸೆ ಕೊಡದೆ ವೈದ್ಯೆ ನಿರ್ಲಕ್ಷ್ಯ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಅವಳಿ ಮಕ್ಕಳಿಗೆ ಜನ್ಮ ನೀಡಿದ್ದ ಕಸ್ತೂರಿ ನಂತರ ರಕ್ತಸ್ರಾವವಾಗಿ ಸಾವನ್ನಪ್ಪಿದ್ದರು. ಬಳಿಕ ಅವಳಿ ಮಕ್ಕಳು ಸಹ ಮೃತಪಟ್ಟಿದ್ದವು. ಈ ಪ್ರಕರಣ ಸಂಬಂಧ ಕರ್ತವ್ಯ ಲೋಪದ ಮೇಲೆ ಮಹಿಳೆ ಡೆಲೆವರಿಗೆ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ವೈದ್ಯೆ ಹಾಗೂ ಮೂವರು ನರ್ಸ್ಗಳನ್ನು ಸಸ್ಪೆಂಡ್ ಮಾಡಿದ್ದಾರೆ.
Key words: Death – mother – twins – Tumkur doctor –Nurse- suspended.