ಮೈಸೂರು,ಮೇ,29,2023(www.justkanna.in): ಮೈಸೂರು ಜಿಲ್ಲೆಯ ಟಿ.ನರಸೀಪುರ-ಕೊಳ್ಳೆಗಾಲ ರಸ್ತೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸಂಭವಿಸಿದ್ದ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎನ್ನಲಾಗಿದೆ.
ಖಾಸಗಿ ಬಸ್ ಮತ್ತು ಇನ್ನೋವಾ ಕಾರು ಡಿಕ್ಕಿಯಾಗಿ ಈ ಭೀಕರ ಅಪಘಾತ ಸಂಭವಿಸಿದ್ದು ಡಿಕ್ಕಿ ರಭಸಕ್ಕೆ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಮೃತಪಟ್ಟವರು ಬಳ್ಳಾರಿ ಮೂಲದವರು. ಪ್ರವಾಸಕ್ಕೆಂದು ಮೈಸೂರಿಗೆ ಬಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೂವರಿಗೆ ಗಂಭೀರ ಗಾಯಗಳಾಗಿದೆ. ಗಾಯಗೊಂಡವರನ್ನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ.
Key words: Death -rises – 10 People- Mysore -accident