ಹಾಸನ,ಮಾರ್ಚ್,22,2025 (www.justkannada.in): ಬಿಸಿಲಿನ ಝಳ ಹಿನ್ನೆಲೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾದ ಘಟನೆ ಹಾಸನ ಜಿಲ್ಲೆಯ ಸಕಲೆಶಪುರ ತಾಲೂಕಿನ ಹೆನ್ನಲಿ ಗ್ರಾಮದಲ್ಲಿ ನಡೆದಿದೆ.
ಕಾಟಳ್ಳಿ ಗ್ರಾಮದ ಪ್ರಕಾಶ್ (29) ಹಾಗೂ ಚಿಕ್ಕಮಗಳೂರಿನ ಭರತ್ (27) ಮೃತಪಟ್ಟವರು. ಸ್ನೇಹಿತರ ಜೊತೆ ಹೇಮಾವತಿ ನದಿಗೆ ಈಜಲು ಹೋಗಿದ್ದ ವೇಳೆ ಈ ಇಬ್ಬರು ಯುವಕರು ನೀರುಪಾಲಾಗಿದ್ದಾರೆ.
ಸ್ನೇಹಿತರ ಜೊತೆಗೆ ಈಜಲು ಹೇಮಾವತಿ ನದಿಗೆ ಹೋಗಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳೀಯರ ಸಹಾಯದಿಂದ ಅಗ್ನಿಶಾಮಕ ಸಿಬ್ಬಂದಿಗಳು ಶವವನ್ನ ನೀರಿನಿಂದ ಹೊರ ತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಟೌನ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Key words: Two, young men, death, water, swim, Hassan