ಬೆಂಗಳೂರು,ಮೇ,2021(www.justkannada.in): ರಾಜ್ಯದಲ್ಲಿ ಒಟ್ಟು 100 ಬ್ಲಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿವೆ. ಬ್ಲಾಕ್ ಫಂಗಸ್ ಚಿಕಿತ್ಸೆಗೆ ಅಗತ್ಯ ಔಷಧ ಪೂರೈಸಲಾಗುತ್ತಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳ ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್, ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಔಷಧ ಒದಗಿಸುವ ಕೆಲಸವಾಗುತ್ತಿದೆ. ಹಾಗೆಯೇ ಸಿಬ್ಬಂದಿ ಕೊರತೆ ನೀಗಿಸಲು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಜೂನ್ 7 ರ ನಂತರ ಲಾಕ್ ಡೌನ್ ಮುಂದುವರಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಅಶ್ವಥ್ ನಾರಾಯಣ್, ಸದ್ಯ ಜೂನ್ 7ರವರೆಗೆ ಲಾಕ್ ಡೌನ್ ಇದೆ. ಲಾಕ್ ಡೌನ್ ಬಗ್ಗೆ ಈಗಲೇ ಮಾತನಾಡೋದು ಸರಿ ಇಲ್ಲ. ಈಗಲೇ ಅಲ್ ಲಾಕ್ ಬಗ್ಗೆ ತೀರ್ಮಾನ ಮಾಡಲ್ಲ. ಲಾಕ್ ಡೌನ್ ನಂತರ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ. ಇನ್ನು ಕೆಲವು ದಿನಗಳ ಕಾಲ ಪರಿಸ್ಥಿತಿ ನೋಡಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
Key words: Decide – continuation – lockdown – situation- DCM –ashwath narayan