ಬೆಂಗಳೂರು,ಜೂನ್.15,2023(www.justkannada.in): ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು(ಜೂನ್ 15) ನಡೆದ ಸಚಿವ ಸಂಪುಟದಲ್ಲಿ ಕೆಲ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಯಿತು. ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಯಿತು ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯಲ್ಲಿ ಸೇರಿಸಿದ್ದ ಅಂಶಗಳನ್ನು ಕೈಬಿಟ್ಟು ತಿದ್ದುಪಡಿ ಮಾಡಲು ನಿರ್ಧಾರ ಮಾಡಲಾಗಿದೆ.
ಸಚಿವ ಸಂಪುಟ ಮುಗಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಎಚ್ಕೆ ಪಾಟೀಲ್, ಸಭೆಯಲ್ಲಿ ಕೈಗೊಳ್ಳಲಾದ ಪ್ರಮುಖ ತೀರ್ಮಾನಗಳ ಬಗ್ಗೆ ಮಾಹಿತಿ ನೀಡಿದರು.
ರಾಷ್ಟ್ರಗೀತೆ ಹಾಡುವ ಸ್ಥಳಗಳಲ್ಲಿ ಸಂವಿಧಾನದ ಪೀಠಿಕೆ ಓದುವುದುನ್ನು ಕಡ್ಡಾಯಗೊಳಿಸಲಾಗುವುದು. ಪಠ್ಯ ಪುಸ್ತಕ ಪರಿಷ್ಕರಣೆಗೆ ಸಚಿವ ಸಂಪುಟ ಸಭೆ ಅನುಮೋದಿಸಿದೆ. ಎಪಿಎಂಸಿ ಕಾನೂನು ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ.
Key words: Decision -amend -Prohibition of Conversion Act -State -Cabinet -meeting.