ಬೆಂಗಳೂರು,ಮೇ,16,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 66 ಸ್ಥಾನಗಳನ್ನ ಗಳಿಸಿ ಸೋಲನುಭವಿಸಿರುವ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉತ್ತರಿಸಿದ್ದಾರೆ.
ಈ ಕುರಿತು ಮಾತನಾಡಿದ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ. ಪಕ್ಷದ ಸೋಲಿಗೆ ಬಿ.ಎಲ್.ಸಂತೋಷ್ ಕಾರಣ ಎಂಬ ಆರೋಪವಿದೆ. ರಾಜ್ಯ ಬಿಜೆಪಿ ಘಟಕವೇ ಸೋಲಿನ ಹೊಣೆಯನ್ನ ಹೊರುತ್ತದೆ. ಎಲ್ಲಿ ಏನು ತಪ್ಪಾಗಿದೆ ಎಂದು ನಾವು ವಿಮರ್ಶೆ ಮಾಡುತ್ತೇವೆ ಎಂದರು.
ವಿಧಾನಸಭೆ ಚುನಾವಣೆ ಬೇರೆ, ಲೋಕಸಭೆ ಚುನಾವಣೆ ಬೇರೆ. ಬೇರೆ ಬೇರೆ ವಿಚಾರಗಳಲ್ಲಿ ಈ 2 ಚುನಾವಣೆಗಳು ನಡೆಯುತ್ತವೆ. ಈಗ ಲೋಕಸಭಾ ಚುನಾವಣೆ ನಡೆದರೆ ಬಿಜೆಪಿ 330ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಸಮೀಕ್ಷೆಗಳು ತಿಳಿಸಿವೆ ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು.
ಈ ಚುನಾವಣೆ ಬಿಜೆಪಿ ಪಾಲಿಗೆ ನಿರಾಶದಾಯಕ ಫಲಿತಾಂಶ ಎಂದು ಬೇಸರ ಹೊರ ಹಾಕಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪಕ್ಷದ ಸೋಲನ್ನು ನಾನು ಸವಾಲಾಗಿ ಸ್ವೀಕರಿಸುತ್ತೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಶ್ರಮ ವಹಿಸುತ್ತೇವೆ ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು.
Key words: Decision – -BJP –state- president-change-Union Minister -Prahlad Joshi.