ಬೆಂಗಳೂರು,ಜನವರಿ,4,2022(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕು ಉಲ್ಬಣಿಸುತ್ತಿರುವ ಹಿನ್ನೆಲೆ ಕಟ್ಟುನಿಟ್ಟಿನ ಕ್ರಮಕ್ಕೆ ಸರ್ಕಾರ ಮುಂದಾಗಿದ್ದು ಇಂದು ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ತಜ್ಞರ ಜತೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದಾರೆ.
ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ರಾಜ್ಯದಲ್ಲಿ 3ನೇ ಅಲೆ ಶುರುವಾಗಿದೆ ಒಮಿಕ್ರಾನ್ ವೇಗವಾಗಿ ಹರುಡುತ್ತಿದೆ. ಹೀಗಾಗಿ ರಾಜ್ಯದಲ್ಲಿ ಬಿಗಿ ಕ್ರಮ ಕೈಗೊಳ್ಳುತ್ತೇವೆ. ಜನರ ಮೇಲೆ ಒತ್ತಡ ಬೀಳದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಸಂಜೆ ಸಿಎಂ ತಜ್ಞರ ಸಭೆ ಕರೆದಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಖಳ ಬಗ್ಗೆ ಸಂಜೆ ಸಿಎಂ ಸಭೆಯಲ್ಲಿ ನಿರ್ಧಾರ ಮಾಡಲಾಗುತ್ತದೆ. ಜನರ ಮೇಲೆ ಒತ್ತಡ ಹಾಕದಂತೆ ಸೋಂಕು ನಿಯಂತ್ರಣ ಮಾಡಲಾಗುತ್ತದೆ. ಸಭೆಯಲ್ಲಿ ಕೈಗೊಳ್ಳುವ ನಿರ್ಣಯವೇ ಅಂತಿಮವಾಗಿರುತ್ತದೆ ಎಂದರು.
ಬೆಂಗಳೂರಿನಲ್ಲಿ ಕಠಿಣ ನಿಯಮ ಜಾರಿ ಮಾಡಲಾಗುತ್ತದೆ. ಲಾಕ್ ಡೌನ್ ಬದಲು ಟಫ್ ರೂಲ್ಸ್ ಜಾರಿ ಮಾಡಲಾಗುವುದು. ಇನ್ನು ಮಕ್ಕಳಿಗೆ ಕೋವಿಡ್ ಲಸಿಕೆ ಸಂಬಂಧ ಮೊದಲ ಡೋಸ್ ಕೊಡಲು ಕೇಂದ್ರ ಹೇಳಿದೆ. 2ನೇ ಡೋಸ್ ಗೆ ಕೇಂದ್ರದಿಂದ ನಿರ್ದೇಶನ ಬಂದಿಲ್ಲ ಎಂದರು.
Key words: Decision –CM- meeting – evening – steps- necessary –control- covid-Minister -Dr. K. Sudhakar